More

    ರಾಜ್ಯಾದ್ಯಂತ ಮದ್ಯ ಮಾರಾಟ, ಸಾಗಾಟ, ಸಂಗ್ರಹ ಬಂದ್; ಎಂದಿನಿಂದ ಎಂದಿನವರೆಗೆ?

    ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಬುಧವಾರ (ಮೇ 10) ಮತದಾನ ನಡೆಯುವ ಹಿನ್ನೆಲೆಯಲ್ಲಿ ಮೇ 8ರ ಸಂಜೆ 5 ಗಂಟೆಯಿಂದ ಮೇ 11ರ ಬೆಳಗ್ಗೆ 11 ಗಂಟೆವರೆಗೆ ಹಾಗೂ ಮೇ 13ರ ಬೆಳಗ್ಗೆ 6 ಗಂಟೆಯಿಂದ ಮೇ 14ರ ಮುಂಜಾನೆ 6 ಗಂಟೆವರೆಗೆ ರಾಜ್ಯಾದ್ಯಂತ ಮದ್ಯದಂಗಡಿ, ಬಾರ್ ಹಾಗೂ ಮದ್ಯ ತಯಾರಿಕಾ ಘಟಕಗಳು ಬಂದ್ ಆಗಲಿವೆ. ಈ ವೇಳೆ ಸಾಗಾಣಿಕೆ, ಸಂಗ್ರಹಣೆ ಹಾಗೂ ಮಾರಾಟ ಮಾಡದಂತೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

    ಇದನ್ನೂ ಓದಿ: ನೀಟ್ ಬರೆಯುವ ವಿದ್ಯಾರ್ಥಿಗಳಿಗೆ ಮೋದಿ ರೋಡ್ ಶೋ ಅಡ್ಡಿ ಆಗಿತ್ತೇ?

    ಎರಡು ದಿನ ಮದ್ಯದಂಗಡಿ ಬಂದ್ ಆಗುವ ಹಿನ್ನೆಲೆಯಲ್ಲಿ ರಾಜಕೀಯ ಅಭ್ಯರ್ಥಿಗಳು, ಮತದಾರರಿಗೆ ಆಮಿಷವೊಡ್ಡಲು ಅಡ್ಡದಾರಿಯಲ್ಲಿ ಈಗಾಗಲೇ ಕೋಟ್ಯಂತರ ರೂಪಾಯಿ ಮೌಲ್ಯದ ಮದ್ಯ ಸಂಗ್ರಹಿಸಿಟ್ಟಿದ್ದಾರೆ. ಮದ್ಯ ಖರೀದಿ ಮೇಲೆ ಚುನಾವಣಾ ಆಯೋಗ ಹಾಗೂ ಇಲಾಖೆ ಕಣ್ಗಾವಲು ಇಟ್ಟಿದ್ದರೂ ಹಲವು ಜಿಲ್ಲೆಗಳಲ್ಲಿ ಕೆಲ ಅಭ್ಯರ್ಥಿಗಳು, ಬೇರೆ ಹೆಸರಿನಲ್ಲಿ ಸಾವಿರಾರು ಬಾಕ್ಸ್‌ಗಳನ್ನು ಮದ್ಯ ಖರೀದಿಸಿ ಸಂಗ್ರಹಿಸುತ್ತಿರುವ ಬಗ್ಗೆ ಗಂಭೀರ ಆರೋಪಗಳಿವೆ.

    ನಕ್ಕರೆ ಕಣ್ಣೀರೂ ಆನಂದಬಾಷ್ಪ!; ನಗುವಿನಿಂದ ಅಂದ-ಆನಂದ-ಆಹ್ಲಾದ

    ಎಲೆಕ್ಟ್ರಿಕ್ ದ್ವಿಚಕ್ರವಾಹನಗಳ ಬೆಲೆಯಲ್ಲಿ ಭಾರಿ ಇಳಿಕೆ; ಕಾರಣ ಇದು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts