

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಸ್ಪಷ್ಟ ಬಹುಮತ ಪಡೆದ ಕಾಂಗ್ರೆಸ್ ಅಧಿಕಾರ ಹಿಡಿಯಲು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದೆ. ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದ ಲೆಕ್ಕಾಚಾರ ತಲೆಕೆಳಗಾಗಿದ್ದು, ಹೀನಾಯವಾಗಿ ಸೋಲು ಕಂಡಿದೆ. ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ. ಕಾಂಗ್ರೆಸ್ ನಾಯಕರು ಗೆಲುವಿನ ಸಂಭ್ರಮದಲ್ಲಿದ್ದಾರೆ.
ಕಾಂಗ್ರೆಸ್ 136 ಸ್ಥಾನ, ಬಿಜೆಪಿ 65, ಜೆಡಿಎಸ್ 19, ಇತರ 4 ಸ್ಥಾನಗಳು ಬಂದಿದೆ. ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕವಾಗಿ ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಿದೆ.
ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ. ಬಿಜೆಪಿಯ ಪಕ್ಷದಲ್ಲಿರುವ ಅನೇಕ ಘಟಾನುಘಟಿ ನಾಯಕರುಗಳೇ ಹೀನಾಯವಾಗಿ ಸೋಲು ಕಂಡಿದ್ದಾರೆ. ಈ ನಾಯಕರುಗಳ ಸೋಲಿಗೆ ಕಾರಣವೇನು ಎನ್ನುವ ಚರ್ಚೆ ಸಾರ್ವಜನಿಕ ವಲಯದಲ್ಲಿ ಶುರುವಾಗಿದೆ.
ಬಿಜೆಪಿ ಸೋಲಿಗೆ ಸಂಭಾವ್ಯ ಕಾರಣಗಳು: