More

    ಗೆದ್ದ ಪಕ್ಷೇತರರು ಮತ್ತು ಇತರ ಪಕ್ಷದವರು ಯಾರು? ಇಲ್ಲಿದೆ ವಿವರ…

    ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 136, ಬಿಜೆಪಿಯ 65, ಜಾತ್ಯತೀತ ಜನತಾದಳದ 19, ಅಭ್ಯರ್ಥಿಗಳು ಗೆದ್ದಿದ್ದರೆ ನಾಲ್ಕು ಸ್ಥಾನಗಳಲ್ಲಿ ಇತರರು ಗೆಲುವು ಸಾಧಿಸಿದ್ದಾರೆ. ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಹಾಗೂ ಸರ್ವೋದಯ ಕರ್ನಾಟಕ ಪಕ್ಷದಿಂದ ತಲಾ ಒಬ್ಬರು ಜಯ ಗಳಿಸಿದ್ದಾರೆ. ಆ ನಾಲ್ವರು ಇತರರು ಯಾರು ಎಂಬುದರ ವಿವರ ಇಲ್ಲಿದೆ.

    ಗೆಲುವು ಸಾಧಿಸಿದ ಜನಾರ್ದನ ರೆಡ್ಡಿ

    ಆ ನಾಲ್ವರಲ್ಲಿ ಒಬ್ಬರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಹಾಗೂ ಗಂಗಾವತಿ ಕ್ಷೇತ್ರದ ಅಭ್ಯರ್ಥಿ ಜನಾರ್ದನ ರೆಡ್ಡಿ. 8268 ಮತಗಳಿಂದ ಅವರು ವಿಜಯ ಸಾಧಿಸಿದ್ದಾರೆ. ಇನ್ನೊಬ್ಬರು, ಮೇಲುಕೋಟೆ ವಿಧಾನಸಭೆ ಕ್ಷೇತ್ರದಿಂದ ಗೆದ್ದಿರುವ ಸರ್ವೋದಯ ಕರ್ನಾಟಕ ಪಕ್ಷದಿಂದ ದರ್ಶನ್ ಪುಟ್ಟಣ್ಣಯ್ಯ. ಈ ಕ್ಷೇತ್ರದಲ್ಲಿ ದರ್ಶನ್ ಪುಟ್ಟಣಯ್ಯ ಅವರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ಸೂಚಿಸಿತ್ತು.

    ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ; ಸಿಹಿ ತಿನ್ನಿಸಿ ಸಂಭ್ರಮಿಸಿದ ಮಲ್ಲಿಕಾರ್ಜುನ ಖರ್ಗೆ

    ಇನ್ನು ಪಕ್ಷೇತರರಾಗಿ ಹರಪನಹಳ್ಳಿ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಂ.ಪಿ. ಲತಾ ಮಲ್ಲಿಕಾರ್ಜುನ ಗೆಲುವು ಸಾಧಿಸಿದ್ದಾರೆ. ಇವರು ಬಿಜೆಪಿಯ ಹಾಲಿ ಶಾಸಕ ಕರುಣಾಕರ ರೆಡ್ಡಿ ಅವರನ್ನು ಸೋಲಿಸಿದ್ದಾರೆ. ಲತಾ ಅವರು ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್ ಅವರ ಪುತ್ರಿ. ಗೌರಿಬಿದನೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಪುಟ್ಟಸ್ವಾಮಿ ಗೌಡ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ ಶಿವಶಂಕರ್ ರೆಡ್ಡಿ ಅವರನ್ನು ಪುಟ್ಟಸ್ವಾಮಿಗೌಡ ಸೋಲಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts