More

    ಸಚಿವ ವಿ. ಸೋಮಣ್ಣಗೆ ಎರಡೂ ಕ್ಷೇತ್ರಗಳಲ್ಲೂ ಭಾರೀ ಹಿನ್ನಡೆ

    ಬೆಂಗಳೂರು: ಚಾಮರಾಜನಗರ ಹಾಗೂ ವರುಣಾ ಎರಡೂ ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಿದ್ದ ಸಚಿವ ವಿ. ಸೋಮಣ್ಣ ಅವರಿಗೆ ಮತಎಣಿಕೆಯಲ್ಲಿ ಬಿಗ್​ ಶಾಕ್​ ಎದುರಾಗಿದೆ. ಎರಡೂ ಕ್ಷೇತ್ರಗಳಲ್ಲೂ ಸೋಮಣ್ಣ ಅವರು ಹಿನ್ನಡೆ ಅನುಭವಿಸಿದ್ದಾರೆ.

    ಸೋಮಣ್ಣ ಅವರು ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಚಾಮರಾಜನಗರ ಕ್ಷೇತ್ರದಲ್ಲಿ ಪುಟ್ಟರಂಗಶೆಟ್ಟಿ ವಿರುದ್ಧ ಸ್ಪರ್ಧಿಸಿದ್ದರು. ಆದರೆ, ಎರಡೂ ಕ್ಷೇತ್ರಗಳಲ್ಲಿ ವಿ. ಸೋಮಣ್ಣ ಹಿನ್ನಡೆ ಅನುಭವಿಸಿದ್ದಾರೆ.

    ಚಾಮರಾಜನಗರದಲ್ಲಿ 8ನೇ ಸುತ್ತಿನ ಮತಎಣಿಕೆಯಲ್ಲಿ ಪುಟ್ಟರಂಗಶೆಟ್ಟಿ ಅವರು 43636 ಮತಗಳಿಸಿದರೆ, ಸೋಮಣ್ಣ 33980 ಮತಗಳನ್ನು ಪಡೆದಿದ್ದಾರೆ. 9656 ಮತಗಳಿಂದ ಪುಟ್ಟರಂಗಶೆಟ್ಟಿ ಮುನ್ನಡೆ ಸಾಧಿಸಿದ್ದಾರೆ.

    ವರುಣದಲ್ಲಿ ನಾಲ್ಕನೇ ಸುತ್ತಿನ ಮತಎಣಿಕೆಯಲ್ಲಿ ಸಿದ್ದರಾಮಯ್ಯ ಅವರು 6576 ಮತಗಳನ್ನು ಗಳಿಸಿದ್ದು, ಬಿಜೆಪಿಯ ಸೋಮಣ್ಣ ವಿರುದ್ಧ 2710 ಮತಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

    ಚುನಾವಣಾ ಫಲಿತಾಂಶದ ಸದ್ಯದ ಟ್ರೆಂಡ್​ ಪ್ರಕಾರ ಬಿಜೆಪಿ 82 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ, ಕಾಂಗ್ರೆಸ್​ 106 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ ಜೆಡಿಎಸ್​ 29 ಕ್ಷೇತ್ರಗಳಲ್ಲಿ ಮುಂದಿದೆ.

    ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್​ ಮತ್ತು ಜೆಡಿಎಸ್​ ನಡುವೆ ಪೈಪೋಟಿ ನಡೆದಿದೆ. ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲು 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಒಂದು ವೇಳೆ ಯಾರಿಗೂ ಬಹುಮತ ಬರದಿದ್ದರೆ ಮತ್ತೆ ಅತಂತ್ರ ಸರ್ಕಾರ ರಚನೆಯಾಗಲಿದೆ.

    2018ರ ಫಲಿತಾಂಶ ಏನಿತ್ತು?

    2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್​ 80 ಮತ್ತು ಜೆಡಿಎಸ್​ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್​ ಮತ್ತು ಜೆಡಿಎಸ್​ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.

    LIVE| ಕರ್ನಾಟಕ ಚುನಾವಣಾ ಫಲಿತಾಂಶ 2023: ಕ್ಷಣ ಕ್ಷಣದ ಮಾಹಿತಿಗಾಗಿ ನೇರಪ್ರಸಾರ ವೀಕ್ಷಿಸಿ

    ಕರ್ನಾಟಕ ಚುನಾವಣಾ ಫಲಿತಾಂಶ | ಬಿಜೆಪಿ ದಿಗ್ಗಜರಿಗೆ ಹಿನ್ನಡೆ!

    ಸಿಎಂ ಬಸವರಾಜ ಬೊಮ್ಮಾಯಿ ತವರಿನಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts