More

    ಕರ್ನಾಟಕ ಚುನಾವಣಾ ಫಲಿತಾಂಶ: ಮತಎಣಿಕೆಗೆ ಆರಂಭ, ಅಂಚೆ ಮತದಲ್ಲಿ ಸಿಎಂ ಬೊಮ್ಮಾಯಿ ಮುನ್ನಡೆ

    ಬೆಂಗಳೂರು: ರಾಜ್ಯದ ಜನತೆ ಕುತೂಹಲದಿಂದ ಎದುರು ನೋಡುತ್ತಿದ್ದ ಆ ಕ್ಷಣ ಬಂದಿದೆ. ಕರ್ನಾಟಕದ 16ನೇ ವಿಧಾನಸಭೆಗೆ ಮೇ 10ರಂದು ನಡೆದಿದ್ದ ಮತದಾನದ ಫಲಿತಾಂಶ ಇಂದು ಹೊರಬೀಳಲಿದೆ. ಬೆಳಗ್ಗೆ 8 ಗಂಟೆಯಿಂದ ಮತಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ಹೊತ್ತಿಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಅಂಚೆ ಮತದಲ್ಲಿ ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮುನ್ನಡೆ ಸಾಧಿಸಿದ್ದಾರೆ.

    ಯಾರು ಈ ಬಾರಿಯ ಅಧಿಕಾರದ ಗದ್ದುಗೆ ಏರಲಿದ್ದಾರೆ ಎಂಬ ಕುತೂಹಲಕ್ಕೆ ಇಂದು ತೆರೆಬೀಳಲಿದೆ. ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್​ ಮತ್ತು ಜೆಡಿಎಸ್​ ನಡುವೆ ಪೈಪೋಟಿ ನಡೆದಿದೆ. ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲು 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಒಂದು ವೇಳೆ ಯಾರಿಗೂ ಬಹುಮತ ಬರದಿದ್ದರೆ ಮತ್ತೆ ಅತಂತ್ರ ಸರ್ಕಾರ ರಚನೆಯಾಗಲಿದೆ.

    2018ರ ಫಲಿತಾಂಶ ಏನಿತ್ತು?

    2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್​ 80 ಮತ್ತು ಜೆಡಿಎಸ್​ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್​ ಮತ್ತು ಜೆಡಿಎಸ್​ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.

    ಇದನ್ನೂ ಓದಿ: ದೃಷ್ಟಿ ಇಲ್ಲದಿದ್ರೂ ಶಾಲೆಗೇ ಸಿಬಿಎಸ್​ಇ ಟಾಪರ್​: ಆ್ಯಸಿಡ್​ ದಾಳಿಗೆ ಎರಡೂ ಕಣ್ಣು ಕಳೆದುಕೊಂಡ್ರೂ ಹೋಪ್ ಕಳ್ಕೊಂಡಿಲ್ಲ!

    ಎಲ್ಲೆಲ್ಲಿ ಮತ ಎಣಿಕೆ?

    ರಾಣಿ ಪಾರ್ವತಿ ದೇವಿ ಕಾಲೇಜು ಬೆಳಗಾವಿ, ತೋಟಗಾರಿಕೆ ವಿಶ್ವವಿದ್ಯಾಲಯ, ಬಾಗಲಕೋಟೆ, ಸೈನಿಕ ಶಾಲೆ, ವಿಜಯಪುರ, ಸರ್ಕಾರಿ ಪಿಯು ಕಾಲೇಜು ಯಾದಗಿರಿ, ಕಲಬುರಗಿ ವಿಶ್ವವಿದ್ಯಾಲಯ, ಕಲಬುರಗಿ, ಬಿ.ವಿ.ಬಿ. ಕಾಲೇಜು ಬೀದರ್, ಎಸ್​ಆರ್​ಪಿಎಸ್ ಪಿಯು ಕಾಲೇಜು ರಾಯಚೂರು, ಶ್ರೀ ಗವಿಸಿದ್ದೇಶ್ವರ ಕಾಲೇಜು ಕೊಪ್ಪಳ, ಶ್ರೀ ಜಗದದ್ಗುರು ತೋಂಟದಾರ್ಯ ಕಲೆ, ವಿಜ್ಞಾನ, ವಾಣಿಜ್ಯ ಕಾಲೇಜು ಗದಗ, ಕೃಷಿ ವಿಶ್ವವಿದ್ಯಾಲಯ ಧಾರವಾಡ, ಡಾ.ಎ.ವಿ. ಬಾಳಿಗ ಕಲೆ, ವಿಜ್ಞಾನ ಕಾಲೇಜು ಕುಮಟಾ(ಉತ್ತರ ಕನ್ನಡ), ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಹಾವೇರಿ, ಪ್ರೌಢ ದೇವರಾಯ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹೊಸಪೇಟೆ(ವಿಜಯನಗರ ಜಿಲ್ಲೆ), ರಾವ್ ಬಹುದ್ದೂರ್ ವೈ. ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜು ಬಳ್ಳಾರಿ, ಸರ್ಕಾರಿ ವಿಜ್ಞಾನ ಕಾಲೇಜು ಚಿತ್ರದುರ್ಗ, ಶಿವಗಂಗೋತ್ರಿ ವಿಶ್ವವಿದ್ಯಾಲಯ ದಾವಣಗೆರೆ, ಸಹ್ಯಾದ್ರಿ ಕಲಾ ಕಾಲೇಜು ಶಿವಮೊಗ್ಗ, ಸೇಂಟ್ ಸೆಸಿಲೀಸ್ ಗ್ರೂಪ್ ಆಫ್ ಇನ್​ಸ್ಟಿಟ್ಯೂಟ್ಸ್ ಉಡುಪಿ, ಐಡಿಎಸ್​ಜಿ ಸರ್ಕಾರಿ ಕಾಲೇಜು ಚಿಕ್ಕಮಗಳೂರು, ತುಮಕೂರು ವಿಶ್ವವಿದ್ಯಾಲಯ ತುಮಕೂರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಿಕ್ಕಬಳ್ಳಾಪುರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಲಾರ, ಬಿಎಂಎಸ್ ಮಹಿಳಾ ಕಾಲೇಜು ಬಸವನಗುಡಿ (ಬೆಂಗಳೂರು ಕೇಂದ್ರ), ಮೌಂಟ್ ಕಾರ್ವೆಲ್ ಪಿಯು ಕಾಲೇಜು(ಬಿಬಿಎಂಪಿ ಉತ್ತರ), ಎಸ್​ಎಸ್​ಎಂಆರ್​ವಿ ಪಿಯು ಕಾಲೇಜು ಜಯನಗರ (ಬೆಂಗಳೂರು ದಕ್ಷಿಣ), ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮತ್ತು ಕಾಂಪೋಜಿಟ್ ಪಿಯು ಕಾಲೇಜು(ಬೆಂಗಳೂರು ನಗರ), ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ರಾಮನಗರ, ಮಂಡ್ಯ ವಿಶ್ವವಿದ್ಯಾಲಯ ಮಂಡ್ಯ, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಹಾಸನ, ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸೂರತ್ಕಲ್(ದಕ್ಷಿಣ ಕನ್ನಡ), ಸೇಂಟ್ ಜೋಸೆಫ್ ಕಾನ್ವೆಂಟ್ ಕೊಡಗು, ಸರ್ಕಾರಿ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ಮ್ಯಾನೇಜ್​ವೆುಂಟ್ ಕಾಲೇಜು ಮೈಸೂರು ಮತ್ತು ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಚಾಮರಾಜನಗರ ಗಳಲ್ಲಿ ಮತ ಎಣಿಕೆ ನಡೆಯಲಿದೆ.

    36 ಎಣಿಕೆ ಕೇಂದ್ರ

    ಬೆಂಗಳೂರಿನ ನಾಲ್ಕು ಕೇಂದ್ರಗಳು ಸೇರಿ ರಾಜ್ಯದಲ್ಲಿ ಒಟ್ಟು 36 ಕಡೆಗಳಲ್ಲಿ ಮತ ಎಣಿಕೆ ನಡೆಯಲಿದೆ. 306 ಹಾಲ್ ಹಾಗೂ 4,256 ಟೇಬಲ್​ಗಳನ್ನು ಅಳವಡಿಸಲಾಗಿದೆ. ಈ ಕೇಂದ್ರಗಳಿಗೆ ಒಟ್ಟಾರೆ 224 ಆರ್​ಒಗಳು, 317 ಎಆರ್​ಒಗಳು, 4,256 ಸೂಪರ್ ವೈಸರ್ಸ್, 5,256 ಕೌಂಟಿಂಗ್ ಅಸಿಸ್ಟೆಂಟ್ಸ್, 4,256 ಸೂಕ್ಷ್ಮ ವೀಕ್ಷಕರು, 450 ಹೆಚ್ಚುವರಿ ಎಆರ್​ಒಗಳನ್ನು ನಿಯುಕ್ತಿ ಮಾಡಲಾಗಿದೆ.

    ಸತ್ತರ ನೀರ ಬಿಡಲಿಕ್ಕೆ ಮಗಾ ಇಲ್ಲೇ ಇದ್ದಾನ್ವಾ…

    ಸಾಮೂಹಿಕ ಜವಾಬ್ದಾರಿ: ಮತದಾನ ಪ್ರಮಾಣ, ನಗದು ವಶದಲ್ಲಿ ದಾಖಲೆ

    ಅಧಿಕಾರ ಸೂತ್ರ, ತ್ರಿಪಕ್ಷಗಳ ತಂತ್ರ: ಇಂದು ಫಲಿತಾಂಶ, ವಿವಿಧ ಲೆಕ್ಕಾಚಾರ; ಕುರುಡು ಅಂದಾಜಿನಲ್ಲಿ ನೇತಾರರ ನಡೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts