ಕರ್ನಾಟಕದಲ್ಲಿ ಈ ಬಾರಿ ಮಳೆ ಕೊರತೆ; ಯಾವ ಜಿಲ್ಲೆಯಲ್ಲಿ ಅತೀ ಕಡಿಮೆ ಮಳೆ?

rain.
Published on

ಬೆಂಗಳೂರು: ಕರ್ನಾಟಕದಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಬಹಿರಂಗ ಮಾಡಿದೆ.

ಜೂನ್ 1 ರಿಂದ ಜುಲೈ 19ರ ಅವಧಿಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಒಟ್ಟು ಮಳೆಯ ಶೇ 7ರಷ್ಟು ಮಳೆಯಾಗಿತ್ತು. ಬೆಂಗಳೂರು ನಗರದಲ್ಲಿ ಶೇ 17 ರಷ್ಟು ಅಂದರೆ ಅತ್ಯಧಿಕ ಮಳೆ ದಾಖಲಾಗಿದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ 35.35 ಸೆಂ.ಮೀ ಮಳೆಯಾಗುತ್ತಿದೆ. ಈ ಬಾರಿ

ಈ ವರ್ಷ ಶೇ 23 ರಷ್ಟು ಮಳೆ ಕೊರತೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಲಾಖೆಯ ದತ್ತಾಂಶಗಳ ಪ್ರಕಾರ ಚಿತ್ರದುರ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಈ ಬಾರಿ ಕೊಡಗಿನಲ್ಲಿ ಅತಿ ಹೆಚ್ಚು ಮಳೆ ಕೊರತೆ ವರದಿಯಾಗಿದೆ

ನಂತರದ ಸ್ಥಾನದಲ್ಲಿ ಹಾಸನ, ರಾಮನಗರ ಮತ್ತು ಶಿವಮೊಗ್ಗ ಮತ್ತು ಬಾಗಲಕೋಟೆ ಇವೆ. ಕೆಲವು ಪ್ರದೇಶಗಳಲ್ಲಿ ಮಳೆಯ ಕೊರತೆಯನ್ನು ರಾಜ್ಯ ಸರ್ಕಾರ ಗಮನಿಸಿದೆ. ಈ ಹಿನ್ನೆಲೆಯಲ್ಲಿ ಮೋಡ ಬಿತ್ತನೆ ಮಾಡುವ ವಿಚಾರವಾಗಿ ಹವಾಮಾನ ಇಲಾಖೆಯನ್ನು ಸಂಪರ್ಕಿಸಿದೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net