18.5 C
Bangalore
Monday, December 16, 2019

ಪ್ರವಾಹದ ಸಂದರ್ಭದಲ್ಲಿ ರಾಜಕೀಯ ಮಾಡದೇ ಸಂತ್ರಸ್ತರ ನೆರವಿಗೆ ಮೂರು ಪಕ್ಷಗಳು ಸ್ಪಂದಿಸಬೇಕು: ಮಾಜಿ ಪ್ರಧಾನಿ ಎಚ್​ಡಿಡಿ

Latest News

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

ಬೆಂಗಳೂರು: ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಇರುವಾಗ ಯಾರು ಕೂಡ ರಾಜಕೀಯ ಮಾಡಬಾರದು. ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ 4-5 ದಿನದಿಂದ ಓಡಾಡುತ್ತಿದ್ದಾರೆ. ಮಂತ್ರಿಮಂಡಲವಿಲ್ಲ ಎಂದು ಅವರನ್ನು ಟೀಕೆ ಮಾಡಬಾರದು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ವರಿಷ್ಠ ಎಚ್​.ಡಿ.ದೇವೇಗೌಡ ಅವರು ತಿಳಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೃಷ್ಣಾ ನದಿಪಾತ್ರದಲ್ಲಿ ಹಲವೆಡೆ ಪ್ರವಾಹವಾಗಿದೆ. ರಾಜ್ಯ ಹಿಂದೆಂದೂ ಕಂಡರಿಯದ ಪ್ರವಾಹಕ್ಕೆ ತುತ್ತಾಗಿದೆ. ಇಂತಹ ಸಂದರ್ಭದಲ್ಲಿ ಯಾರು ರಾಜಕೀಯ ಮಾಡಬಾರದು. ಸಿಎಂ ಬಿಎಸ್​ವೈ ಕೂಡ ಸಾಕಷ್ಟು ಶ್ರಮವಹಿಸುತ್ತಿದ್ದಾರೆ. ಎಚ್​.ಡಿ. ಕುಮಾರಸ್ವಾಮಿ ಸಹ ಬಾಗಲಕೋಟೆ ಪ್ರವಾಸ ಮಾಡಿದ್ದಾರೆ. ಹೀಗಾಗಿ ಎಲ್ಲರೂ ಸರ್ಕಾರದ ಜತೆ ಕೈಜೋಡಿಸಬೇಕು ಎಂದು ಹೇಳಿದರು.

ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟ ಆಗಿದೆ. ಕೇಂದ್ರ ಸಚಿವರು ವೈಮಾನಿಕ ಸರ್ವೆ ಮಾಡಿದರೆ ಎಷ್ಟು ನಷ್ಟ ಆಗಿದೆ ಎಂದು ಗೊತ್ತಾಗುವುದಿಲ್ಲ. ಕೂಡಲೇ ಕೇಂದ್ರ ಸರ್ಕಾರ ಮಧ್ಯಂತರವಾಗಿ 5 ಸಾವಿರ ಕೋಟಿ ರೂ. ಹಣ ಬಿಡುಗಡೆ ಮಾಡಬೇಕು. ಜೆಡಿಎಸ್ ಶಾಸಕರ ಒಂದು ತಿಂಗಳ ಸಂಬಳ ನೀಡಲಾಗ್ತಿದೆ. ಸಂತ್ರಸ್ತರಿಗೆ ಅಗತ್ಯವಾದ ವಸ್ತುಗಳನ್ನು ಜೆಡಿಎಸ್​ನಿಂದ ಕಳಿಸಿಕೊಡಲಾಗ್ತಿದೆ. ರಾಜ್ಯದ 3 ಪಕ್ಷದಿಂದಲೂ ಸಂತ್ರಸ್ತರಿಗೆ ನೆರವು ಸಿಗಬೇಕು. ಮೂರು ಪಕ್ಷದವರು ಈ ಸಮಯದಲ್ಲಿ ಒಟ್ಟಾಗಿ ಜನರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಸಲಹೆ ನೀಡಿದರು.

ನಾವು ಸಂತ್ರಸ್ಥರ ಪರ‌ ನಿಲ್ಲುತ್ತೇವೆ
ಇದೇ ವೇಳೆ ಮಾತನಾಡಿದ ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಧ್ಯಮಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಾಧ್ಯಮದವರು ಜೀವವನ್ನು ಅಪಾಯದಲ್ಲಿ ಇಟ್ಟುಕೊಂಡು ಕೆಲ‌ಸ ಮಾಡ್ತಿದ್ದಾರೆ. ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ಪಕ್ಷದಿಂದ‌ ಉತ್ತರ ಕರ್ನಾಟಕದ ಪ್ರವಾಹ ಭಾಗಕ್ಕೆ ಹೋಗಲು ವರಿಷ್ಠರು ಸೂಚನೆ ನೀಡಿದ್ದಾರೆ.‌ ಅದರಂತೆ ನಾಲ್ಕು ಲಾರಿಗಳಲ್ಲಿ ಅಗತ್ಯ ವಸ್ತುಪೂರೈಕೆ ಮಾಡಲಾಗ್ತಿದೆ. ನಾವು ಸಂತ್ರಸ್ಥರ ಪರ‌ ನಿಲ್ಲುತ್ತೇವೆ. ನಾನು ಹುಬ್ಬಳ್ಳಿಯಿಂದ ಯಾದಗಿರಿವರೆಗೆ ಪ್ರವಾಸ ಕೈಗೊಳ್ಳುತ್ತೇನೆ. ಪ್ರವಾಹ ಸ್ಥಳಗಳಿಗೆ ಭೇಟಿ ಕೊಡುತ್ತೇನೆ. ಸಂತ್ರಸ್ತರಿಗೆ ಅಗತ್ಯ ವಸ್ತುಗಳು ಸಾಕಷ್ಟು ಪೂರೈಕೆ ಆಗುತ್ತಿದೆ. ಆದರೆ, ಅದು ಸಂತ್ರಸ್ತರಿಗೆ ತಲುಪುತ್ತಿಲ್ಲ. ಡಿಸಿ ಕಚೇರಿಗಳಲ್ಲೇ ಸ್ಟಾಕ್ ಆಗ್ತಿದೆ. ಇದು ಸಂತ್ರಸ್ತರಿಗೆ ತಲುಪಬೇಕು. ನಾನು ಅಗತ್ಯ ವಸ್ತುಗಳು ಸಂತ್ರಸ್ತರಿಗೆ ತಲುಪಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು. (ದಿಗ್ವಿಜಯ ನ್ಯೂಸ್​)

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...