ವರ್ಷಾರಂಭದಲ್ಲೇ Ticket Price ಹೆಚ್ಚಿಸಿ ಜನರಿಗೆ ಶಾಕ್​ ನೀಡಿದ ರಾಜ್ಯ ಸರ್ಕಾರ

KSRTC BMTC
Published on

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಸೇರಿದಂತೆ ನಾಲ್ಕೂ ನಿಗಮಗಳ ಪ್ರಯಾಣ ದರವನ್ನು (Ticket Price) ಶೇ.15ರಷ್ಟು ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರ ಜನಸಾಮಾನ್ಯರಿಗೆ ಶಾಕ್​ ನೀಡಿದೆ.

ಸಿಎಂ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಲಾಗಿದ್ದು, ಹೊಸ ವರ್ಷಕ್ಕೆ ರಾಜ್ಯ ಸರ್ಕಾರವು ಜನರಿಗೆ ಪ್ರಯಾಣ ದರ ಏರಿಕೆಯ (Ticket Price Hike) ಬಿಸಿಯನ್ನು ಗಿಫ್ಟ್​ ಆಗಿ ನೀಡಿದೆ.

ಸಾರಿಗೆ ನಿಗಮಗಳು 2020ರಿಂದ ಪ್ರಯಾಣ ದರ ಪರಿಷ್ಕರಣೆ ಮಾಡದಿರುವ ಕಾರಣಕ್ಕೆ ನಷ್ಟಕ್ಕೆ ಸಿಲುಕಿವೆ. ವಾರ್ಷಿಕ 3,650ಕೋಟಿ ರೂ.ಹೊರೆಯಾಗುತ್ತಿದ್ದು, ಪ್ರಯಾಣ ದರ ಪರಿಷ್ಕರಣೆಯಿಂದ ನಷ್ಟದ ಪ್ರಮಾಣ 1,800ಕೋಟಿ ರೂ.ಗೆ ಇಳಿಯುತ್ತದೆ ಎಂದು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್​ ನೇತೃತ್ವದ ಉನ್ನತ ಮಟ್ಟದ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು.

ನಷ್ಟವನ್ನು ಸರಿದೂಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ದರ ಹೆಚ್ಚಳಕ್ಕೆ ಮುಂದಾಗಿದ್ದು, ಶೇ.15ರಷ್ಟು ಏರಿಕೆ ಮಾಡುವ ಮೂಲಕ ಪ್ರಯಾಣಿಕರಿಗೆ ಶಾಕ್​ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net