More

    ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರಕ್ಕೆ ಅಡ್ಡಿ ಮೇಲೆ ಅಡ್ಡಿ!

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಆದಷ್ಟು ಬೇಗ ಅಧಿಕಾರ ವಹಿಸಿಕೊಳ್ಳಲು ಉತ್ಸುಕರಾಗಿರುವ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರ ಪ್ರಯತ್ನಕ್ಕೆ ಮೇಲಿಂದ ಮೇಲೆ ಅಡ್ಡಿಗಳು ಬರುತ್ತಲೇ ಇವೆ.

    ಜೂನ್ 7ರಂದು ಬೆಂಗಳೂರಿನಲ್ಲಿ ಸಮಾರಂಭ ಏರ್ಪಡಿಸಿ ಕೇವಲ 50 ಸಾವಿರ ಜನರ ಸಮ್ಮುಖದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲು ಅವರು ಈ ಮೊದಲು ಯೋಜಿಸಿದ್ದರು. ಅದಕ್ಕಾಗಿ ರಾಜ್ಯದ ಸುಮಾರು 8 ಸಾವಿರ ಸ್ಥಳಗಳಲ್ಲಿ ಕಾರ‌್ಯಕರ್ತರು ನೋಡಲು ಅನುಕೂಲವಾಗುವಂತೆ ದೊಡ್ಡ ಪರದೆಯ ವ್ಯವಸ್ಥೆಯನ್ನೂ ಮಾಡಿದ್ದರು. ಆದರೆ ಅದಕ್ಕೆ ಕರೊನಾ ಲಾಕ್‌ಡೌನ್ ನಿಯಮಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿತ್ತು.

    ಇದನ್ನೂ ಓದಿ ದೇವೇಗೌಡರ ಮನೆಯಲ್ಲಿ ಡಿ.ಕೆ. ಶಿವಕುಮಾರ್ ಭೋಜನ!

    ನಂತರ ದಿನಾಂಕವನ್ನು ಮುಂದೂಡಿ, ಜೂನ್ 14ರಂದು ಅಧಿಕಾರ ಸ್ವೀಕರಿಸುವುದಾಗಿ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ತಿಳಿಸಿದ್ದರು. ಅದಕ್ಕೆ ಪೂರಕವಾಗಿ ರಾಜ್ಯ ಸರ್ಕಾರಕ್ಕೆ ಅಧಿಕೃತ ಮನವಿಯನ್ನೂ ಸಲ್ಲಿಸಿದ್ದರು. ಆದರೆ ಆ ಮನವಿಯನ್ನೂ ರಾಜ್ಯ ಸರ್ಕಾರ ತಿರಸ್ಕರಿಸಿದೆ. ಜೂ. 14ರಂದು ಅಧಿಕಾರ ಸ್ವೀಕಾರ ಸಮಾರಂಭವನ್ನು ಏರ್ಪಡಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.

    ಈ ಕುರಿತು ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ವಿಭಾಗದ ಅಧೀನ ಕಾರ‌್ಯದರ್ಶಿ ಎನ್. ನಾಗರಾಜು ಅಧಿಕೃತ ಆದೇಶ ಹೊರಡಿಸಿದ್ದಾರೆ. ಸಭೆ-ಸಮಾರಂಭಗಳನ್ನು ನಡೆಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಲಾಕ್‌ಡೌನ್ ನಿಯಮಗಳನ್ನು ಅದರಲ್ಲಿ ಉಲ್ಲೇಖಿಸಿದ್ದಾರೆ. ಅನುಮತಿ ನಿರಾಕರಿಸುತ್ತಿರುವ ಈ ಆದೇಶವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಅನುಮೋದಿಸಲ್ಪಟ್ಟಿದೆ ಎಂದೂ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

    ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರಕ್ಕೆ ಅಡ್ಡಿ ಮೇಲೆ ಅಡ್ಡಿ! ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರಕ್ಕೆ ಅಡ್ಡಿ ಮೇಲೆ ಅಡ್ಡಿ!

    ಮೇ ಮೂರರವರೆಗೆ ಧಮ್ ಕಟ್ಕೊಂಡು ಕೂರ್ತೀವಿ ಎಂದ ಡಿ.ಕೆ. ಶಿವಕುಮಾರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts