More

    ತೀವ್ರಗೊಂಡ ಕರೊನಾ: ಸತ್ತವರ ಅಂತ್ಯಕ್ರಿಯೆಗೆ ಹೆಚ್ಚಿನ ಜಾಗ ಗುರುತಿಸಲು ಸೂಚನೆ

    ಬೆಂಗಳೂರು: ಕೋವಿಡ್‌ನಿಂದ ಮೃತರಾದವರ ದೇಹಗಳ ಅಂತ್ಯಕ್ರಿಯೆಯನ್ನು ಜರುಗಿಸಲು ಪ್ರತ್ಯೇಕ ತಂಡಗಳನ್ನು ರಚಿಸಲು ಹಾಗೂ ದೇಹಗಳ ಅಂತ್ಯಕ್ರಿಯೆಯ ಸಲುವಾಗಿ ಇನ್ನೂ ಹೆಚ್ಚಿನ ಜಾಗಗಳನ್ನು ಗುರುತಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.

    ಹಿರಿಯ ಸಚಿವರು, ಅಧಿಕಾರಿಗಳ ಜತೆ ಶನಿವಾರ ನಡೆದ ಸಭೆಯಲ್ಲಿ, ಬೆಂಗಳೂರಿನಲ್ಲಿ ಲಭ್ಯವಿರುವ ಕಲ್ಯಾಣ ಮಂಟಪಗಳು, ಹಾಸ್ಟೆಲ್ಗಳು ಹಾಗೂ ಇತರ ಸಂಸ್ಥೆಗಳನ್ನು ಕೋವಿಡ್ ಕೇರ್ ಸೆಂಟರ್‌ಗಳಿಗೆ ಮೀಸಲಿಡಲು ಹಾಗೂ ರೈಲ್ವೆ ಇಲಾಖೆಯಿಂದ ಬೆಡ್‌ಗಳ ಕೋಚ್‌ಗಳನ್ನು ಪಡೆಯಲು ಅವಶ್ಯ ಕ್ರಮ ಜರುಗಿಸಲು ಸೂಚಿಸಿದರು.

    ಇದನ್ನೂ ಓದಿ ಕರೊನಾಗೆ ಚುಚ್ಚುಮದ್ದಿಗಿಂತ ಮೂಗಿನ ಔಷಧವೇ ಉತ್ತಮ; ಆಕ್ಸ್​ಫರ್ಡ್​ ವಿವಿ ಸಂಶೋಧಕರ ಅಭಿಮತ

    ಮೆಡಿಕಲ್ ಕಾಲೇಜ್ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್‌ಗಳ ಪೈಕಿ ಶೇ. 50 ರಷ್ಟನ್ನು ಕೋವಿಡ್ ರೋಗಿಗಳ ಸಲುವಾಗಿ ಮೀಸಲಿಡಲು ಬಿ.ಬಿ.ಎಂ.ಪಿ ಆಯುಕ್ತರಿಗೆ ಸೂಚಿಸಲಾಯಿತು. ಆಸ್ಪತ್ರೆಗಳಲ್ಲಿ ಬೆಡ್‌ಗಳು ಪೂರ್ತಿಯಾದ ನಂತರ ರೋಗಿಗಳ ಚಿಕಿತ್ಸೆಗಾಗಿ ಹೋಟೆಲ್ಗಳ ಕೊಠಡಿಗಳನ್ನು ಬಳಸಿಕೊಳ್ಳುವ ಉದ್ದೇಶದಿಂದ ಹೋಟೆಲ್ಗಳನ್ನು ಆಸ್ಪತ್ರೆಗಳಿಗೆ ಟೈ ಅಪ್ ಮಾಡಲು ಬಿ.ಬಿ.ಎಂ.ಪಿ ಆಯುಕ್ತರಿಗೆ ನಿರ್ದೇಶಿಸಲಾಯಿತು.

    ವೈದ್ಯರ ಕೊರತೆ ಇರುವ ಕಾರಣ ಕಾರ್ಮಿಕ ಇಲಾಖೆಯಿಂದ ನೇಮಕವಾಗಿರುವ 180 ಎಎಸ್‌ಐ ಡಾಕ್ಟರ್‌ಗಳನ್ನು ಕೋವಿಡ್ ಕರ್ತವ್ಯಕ್ಕೆ ಬಳಸಿಕೊಳ್ಳಲು ಮತ್ತು ಪರೀಕ್ಷಾರ್ಥಿ ತಹಶೀಲ್ದಾರ್‌ಗಳನ್ನು ಕೋವಿಡ್ ಆಸ್ಪತ್ರೆಗಳು ಮತ್ತು ಕೇರ್ ಸೆಂಟರ್‌ಗಳಿಗೆ ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲು ತಿಳಿಸಲಾಯಿತು.

    ಇದನ್ನೂ ಓದಿ ಯಾವ ದೇಶ ಮೊದಲಿಗೆ ಪಡೆಯುತ್ತೆ ಕರೊನಾ ಲಸಿಕೆ? ಭಾರತಕ್ಕೂ ಖುಲಾಯಿಸುತ್ತೆ ಅದೃಷ್ಟ

    ದೆಹಲಿಯಲ್ಲಿ ಕೋವಿಡ್​ ರೋಗಿಗಳಿಗಾಗಿ ಸಜ್ಜಾಗಿದೆ ಜಗತ್ತಿನಲ್ಲಿಯೇ ಅತಿದೊಡ್ಡ ಚಿಕಿತ್ಸಾ ಕೇಂದ್ರ…!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts