More

    ಸುಳ್ಳು ಪೋಸ್ಟ್ ಹಾಕಿದರೆ ಪೊಲೀಸ್ ಕೇಸ್! ಜಾಲತಾಣಗಳ ಮೇಲೆ ಸರ್ಕಾರದ ಹದ್ದಿನ ಕಣ್ಣು

    ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರ, ಮುಖ್ಯಮಂತ್ರಿ, ಮಂತ್ರಿಗಳು, ಕಾಂಗ್ರೆಸ್ ನಾಯಕ ವಿರುದ್ಧ ಸುಳ್ಳು ಮಾಹಿತಿ, ತಿರುಚಿದ ಫೋಟೋಗಳನ್ನು ಹಾಕುವವರ ಹೆಡೆಮುರಿ ಕಟ್ಟಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಬಿ ದಯಾನಂದ ನೇಮಕ

    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಅಪಪ್ರಚಾರ ಮಾಡುವ ಹಾಗೂ ತಿರುಚಿದ ಫೋಟೋಗಳ ಮೂಲಕ ವಿಕೃತಿಯನ್ನುಂಟು ಮಾಡುವವರ ಸಂಖ್ಯೆಯನ್ನು ನಿಯಂತ್ರಿಸುವುದಕ್ಕಾಗಿ ಈ ತೀರ್ಮಾನಕ್ಕೆ ಬಂದಿದೆ ಎಂದು ಸರ್ಕಾರದ ಉನ್ನತ ಮೂಲಗಳು ಖಚಿತಪಡಿಸಿವೆ. ಸಾಮಾಜಿನ ಜಾಲತಾಣಗಳ ಮೇಲೆ ನಿಗಾ ಇರಿಸುವಂತೆ ಸೈಬರ್ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನಾಯಕರು ಮಾತ್ರವಲ್ಲದೇ ಚುನಾವಣೆಯಲ್ಲಿ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುವ ಮೂಲಕ ಗೊಂದಲ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕದಿದ್ದರೆ ಜಾಲತಾಣಗಳ ದುರ್ಬಳಕೆ ಇನ್ನಷ್ಟು ಹೆಚ್ಚಾಗುತ್ತದೆ ಎಂದು ಮೂಲಗಳು ಹೇಳಿವೆ.

    ಪೊಲೀಸ್ ಇಲಾಖೆಗೆ ಖಡಕ್ ಸೂಚನೆ

    ಕಾಂಗ್ರೆಸ್‌ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸರ್ಕಾರ ರಚನೆ ಮಾಡಿದ ನಂತರ ಸಾಮಾಜಿಕ ಜಾಲತಾಣದ ದುರ್ಬಳಕೆ ಹೆಚ್ಚುತ್ತಿದೆ ಎಂದು ಹೇಳಲಾಗುತ್ತಿದೆ. ಕೇಂದ್ರ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆ ಪ್ರಕಾರ, ಆಕ್ಷೇಪಾರ್ಹ ಮತ್ತು ಆಧಾರ ರಹಿತ ಟೀಕೆ, ಹೇಳಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶವಿದೆ. ಇದೇ ನಿಯಮ ಆಧರಿಸಿ ಇಂತಹ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ.

    ಇದನ್ನೂ ಓದಿ: ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಕೋರ್ಟ್

    ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್‌, ಜಮೀರ್ ಅಹಮ್ಮದ್‌ ಖಾನ್‌, ಪಿಯಕೃಷ್ಣ ಸೇರಿ ಅನೇಕರು ಜತೆಯಲ್ಲಿ ಊಟ ಮಾಡುತ್ತಿದ್ದು, ಅವರ ತಟ್ಟೆಯಲ್ಲಿ ಸಸ್ಯಹಾರವಿತ್ತು. ಆದರೆ, ಈ ಫೋಟೋವನ್ನು ತಿರುಚಿ ಮಾಂಸಾಹಾರ ಸೇವನೆ ಮಾಡುತ್ತಿದ್ದಾರೆ. ಎಂಬ ರೀತಿಯಲ್ಲಿ ತಿರುಚಿ ಜಾಲತಾಣದಲ್ಲಿ ವೈರಲ್ ಮಾಡಲಾಗಿದೆ. ಇದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಯಾಗಿದೆ. ಡಿ.ಕೆ. ಶಿವಕುಮಾರ್ ಟಿಪ್ಪು ಸಮಾಧಿಗೆ ನಮನ ಸಲ್ಲಿಸುತ್ತಿರುವ ಪೋಟೋ ಹರಿಯಬಿಡಲಾಗಿತ್ತು. ಇದು ಚರ್ಚೆಗೆ ಗುರಿಯಾಗಿತ್ತು.

    ಪ್ರತ್ಯೇಕ ಇನ್ಸ್​​ಪೆಕ್ಟರ್ ನೇಮಕ

    ಸಿಐಡಿಯಲ್ಲಿರುವ ಸೈಬರ್ ವಿಭಾಗದಲ್ಲಿ ಪ್ರತ್ಯೇಕ ಇನ್ಸ್‌ಪೆಕ್ಟರ್ ಒಬ್ಬರನ್ನು ನೇಮಕ ಮಾಡಲಾಗುತ್ತದೆ. ಅವರು ಪ್ರತಿನಿತ್ಯ ಸಾಮಾಜಿಕ ಜಾಲತಾಣಗಳನ್ನು ಗಮನಿಸಿ, ಸರ್ಕಾರದ ವಿರುದ್ಧ ಇರುವ ಪೋಸ್ಟ್‌ಗಳನ್ನು ಗಮನಿಸಬೇಕು. ಅವುಗಳ ಸೃಷ್ಟಿಕರ್ತರು, ಎಲ್ಲಿಂದ ಪೋಸ್ಟ್ ಆಗಿವೆ ಎಂಬುದನ್ನು ದೃಢಪಡಿಸಿಕೊಂಡು ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳುವ ಜವಾಬ್ದಾರಿ ನೀಡಲಾಗುತ್ತದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts