ಕಾಂಗ್ರೆಸ್ ಸರ್ಕಾರದಲ್ಲಿ Karnataka ರೌಡಿಗಳ ರಾಜ್ಯವಾಗಿದೆ; ವಿಪಕ್ಷ ನಾಯಕ ಆರ್​.ಅಶೋಕ ಗರಂ

dk (33)
Published on

ಬೆಂಗಳೂರು: ಬಂಧನವಾಗಿ ಪೊಲೀಸ್ ವಶದಲ್ಲಿರುವ ಒಬ್ಬ(ಸಿ.ಟಿ.ರವಿ) ಪರಿಷತ್ ಸದಸ್ಯನಿಗೆ ತಮ್ಮ ಸರ್ಕಾರ ರಕ್ಷಣೆ ಕೊಡಲು ಆಗುತ್ತಿಲ್ಲ ಅಂದಮೇಲೆ ನಿಮ್ಮ ಸರ್ಕಾರವನ್ನು ರೌಡಿಗಳು, ಗೂಂಡಾಗಳು ಹೈಜಾಕ್ ಮಾಡಿರಬೇಕು(Karnataka) ಅಥವಾ ಸರ್ಕಾರದ ಭಾಗವಾಗಿರುವವರೇ ರೌಡಿಗಳು, ಗೂಂಡಾಗಳಾಗಿರಬೇಕು ಎಂದು ವಿಪಕ್ಷ ನಾಯಕ ಆರ್​.ಅಶೋಕ ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ದೇಶದ್ರೋಹಿಗಳು ಯಾವುದೇ ಕಾನೂನು ಕ್ರಮವಿಲ್ಲದೆ ಹೊರಗಿದ್ದಾರೆ. ಆ ದೇಶದ್ರೋಹಿಗಳನ್ನ ಸಮರ್ಥನೆ ಮಾಡಿಕೊಂಡು, ಸುದ್ದಿ ಬಿತ್ತರಿಸಿದ ಮಾಧ್ಯಮಗಳ ಮೇಲೆ ಹೌಹಾರಿದವರು ಇನ್ನೂ ರಾಜಾರೋಷವಾಗಿ ಮಂತ್ರಿಗಳಾಗಿ ಗೂಟದ ಕಾರಿನಲ್ಲಿ ಓಡಾಡುತ್ತಿದ್ದಾರೆ ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ.

ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎರಡನೇ ವಿಭಾಗದ ಸಹಾಯಕ (ಎಸ್‌ಡಿಎ) ರುದ್ರೇಶ್ ಯಾದವಣ್ಣನವರ್ ಅವರ ಅನುಮಾನಾಸ್ಪದ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪಿಎ ವಿರುದ್ಧ ದೂರಿದೆ. ಆ ತನಿಖೆ ಎಲ್ಲಿವರೆಗೆ ಬಂತು. ಎಷ್ಟು ಜನರ ಬಂಧನವಾಗಿದೆ?. ನಾಚಿಕೆ ಆಗಬೇಕು ಈ ಗೂಂಡಾಗಳ, ರೌಡಿಗಳ ಕಾಂಗ್ರೆಸ್ ಸರ್ಕಾರಕ್ಕೆ ಎಂದು ಕೆಂಡ ಕಾರಿದ್ದಾರೆ.

''ಸಿ.ಟಿ. ರವಿ ಅವರನ್ನು ಬೇಷರತ್ ಬಿಡುಗಡೆ ಮಾಡಿ ಅವರ ಮೇಲೆ ದೌರ್ಜನ್ಯ ನಡೆಸಿದ ಕಾಂಗ್ರೆಸ್ ಗೂಂಡಾಗಳನ್ನು ಜೈಲಿಗೆ ಅಟ್ಟುವ ವರೆಗೂ ಬಿಜೆಪಿ ಹೋರಾಟ ನಿಲ್ಲದು. ಶಾಸಕ ಸಿ ಟಿ ರವಿಯವರ ಮೇಲೆ ಸುವರ್ಣ ಸೌಧದಲ್ಲಿ ಮಾರ್ಷಲ್ ಗಳ ಸುಮ್ಮುಖದಲ್ಲೇ ಹೊರಗಿನ ಗೂಂಡಾಗಳಿಂದ ನಡೆದಿರುವ ದೌರ್ಜನ್ಯ ಹಾಗೂ ಮಾರಣಾಂತಿಕ ಹಲ್ಲೆಯತ್ನದ ಕುರಿತು ಉಭಯ ಸದನಗಳ ಸ್ಪೀಕರ್ ಗಳು ತಮ್ಮ ನಿಲುವು ಪ್ರಕಟಿಸಿ ಕ್ರಮ ಕೈಗೊಳ್ಳಬೇಕು, ರಾಜ್ಯಪಾಲರು ಈ ಕೂಡಲೇ ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸುವೆ'' | ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಧ್ಯಕ್ಷ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net