'ಕರ್ನಾಟಕ ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ತರುವ ನಿರ್ಧಾರ ಹೊಂದಿದೆ'| ರಾಹುಲ್​ಗಾಂಧಿ ಮನವಿಗೆ ಸಿಎಂ ಸಿದ್ದರಾಮಯ್ಯ ಗ್ರೀನ್​ ಸಿಗ್ನಲ್| CM

CM Siddaramaiah
Published on

Rahul gandhi| ಶಿಕ್ಷಣದಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಯಾರೂ ಎದುರಿಸದಂತೆ ಖಾತ್ರಿಪಡಿಸಲು ರೋಹಿತ್ ವೇಮುಲಾ ಕಾಯ್ದೆಯನ್ನು ಅಳವಡಿಸಿಕೊಳ್ಳಬೇಕು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪತ್ರ ಬರೆದು ಒತ್ತಾಯಿಸಿದ್ದರು.

ಇನ್ನೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕರ್ನಾಟಕದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೆ ತರಲು ಮನವಿ ಮಾಡಿದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರವು ರಾಜ್ಯದಲ್ಲಿ ಈ ಕಾಯ್ದೆಯನ್ನು ಜಾರಿಗೆ ತರುವ ನಿರ್ಧಾರದಲ್ಲಿ ದೃಢವಾಗಿ ನಿಂತಿದೆ ಮತ್ತು ಆದಷ್ಟು ಬೇಗ ಕಾನೂನು ತರಲಿದೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿಯವರ ಪತ್ರ ಮತ್ತು ಸಾಮಾಜಿಕ ನ್ಯಾಯಕ್ಕೆ ಅಚಲವಾದ ಬದ್ಧತೆಗಾಗಿ ನಾನು ಧನ್ಯವಾದ ಹೇಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಮ್ಮ ಸರ್ಕಾರವು ಕರ್ನಾಟಕದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೆ ತರುವ ನಿರ್ಧಾರದಲ್ಲಿ ದೃಢವಾಗಿ ನಿಂತಿದೆ. ಯಾವುದೇ ವಿದ್ಯಾರ್ಥಿ ಜಾತಿ, ವರ್ಗ ಅಥವಾ ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ಎದುರಿಸದಂತೆ ನೋಡಿಕೊಳ್ಳಲು ಈ ಶಾಸನವನ್ನು ಆದಷ್ಟು ಬೇಗ ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್​ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net