More

    13ರೊಳಗೆ ನಿರ್ಧಾರ ಕೈಗೊಳ್ಳಿ; ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ

    ಬೆಂಗಳೂರು: ರಾಷ್ಟ್ರೀಯ ಪಕ್ಷದ ಮಾನ್ಯತೆ ಕೋರಿ ಆಮ್ ಆದ್ಮಿ ಪಕ್ಷ (ಎಎಪಿ) ಸಲ್ಲಿಸಿರುವ ಮನವಿ ಸಂಬಂಧ ಏ.13ರೊಳಗೆ ನಿರ್ಧಾರ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ (ಇಸಿಐ) ಹೈಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.

    ಹಿಂದೆ ಸಲ್ಲಿಸಿದ್ದ ಮನವಿಯನ್ನು ಕೇಂದ್ರ ಚುನಾವಣಾ ಆಯೋಗ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಆಕ್ಷೇಪಿಸಿ ಎಎಪಿ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನ್ಯಾಯಪೀಠ ಈ ನಿರ್ದೇಶನ ನೀಡಿತ್ತು.

    13ರೊಳಗೆ ನಿರ್ಧಾರ ಕೈಗೊಳ್ಳಿ; ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ

    ಇದನ್ನೂ ಓದಿ: ಮಗ ಬಿಜೆಪಿ ಸೇರಿರುವುದು ತುಂಬಾ ನೋವಾಗಿದೆ: ಎ.ಕೆ.ಆ್ಯಂಟನಿ

    ವಿಚಾರಣೆ ವೇಳೆ ಹಿರಿಯ ವಕೀಲ ಕೆ.ದಿವಾಕರ್ ವಾದ ಮಂಡಿಸಿ, ರಾಷ್ಟ್ರೀಯ ಪಕ್ಷದ ಮಾನ್ಯತೆ ಕಲ್ಪಿಸುವಂತೆ ಕೋರಿ ಮೂರೂವರೆ ತಿಂಗಳ ಹಿಂದೆ ಎಎಪಿ ಮನವಿ ಪತ್ರ ಸಲ್ಲಿಸಿದೆ. ಆದರೂ, ಇದರ ಬಗ್ಗೆ ಆಯೋಗ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಅರ್ಜಿದಾರರ ಮನವಿಯನ್ನು ಇನ್ನೂ ಏಕೆ ಪರಿಗಣಿಸಿಲ್ಲ. ಆಯೋಗವು ಸ್ವತಂತ್ರ ಸಂಸ್ಥೆಯಲ್ಲವೇ? ಎಂದು ಆಯೋಗದ ಪರ ವಕೀಲರನ್ನು ಪ್ರಶ್ನಿಸಿತ್ತು.
    ಆಯೋಗದ ಪರ ವಕೀಲರು ಉತ್ತರಿಸಿ, ಅರ್ಜಿದಾರರ ಮನವಿ ಕುರಿತು ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ಎಎಪಿಯ ಮನವಿ ಬಗ್ಗೆ ಏ.13ರ ಒಳಗೆ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.

    ದೆಹಲಿ ಮತ್ತು ಪಂಜಾಬ್ ರಾಜ್ಯಗಳಲ್ಲಿ ಎಎಪಿ ಅಧಿಕಾರ ಹಿಡಿದಿದೆ. ಗೋವಾ ಮತ್ತು ಗುಜರಾತ್ ವಿಧಾನಸಭಾ ಚುನಾವಣೆಗಳಲ್ಲಿ ಶೇ.6 ಮತ ಪಡೆದಿದೆ. ಚುನಾವಣಾ ಚಿಹ್ನೆ (ಮೀಸಲು ಮತ್ತು ಹಂಚಿಕೆ) ಆದೇಶ 1968ರ ಸೆಕ್ಷನ್ 6(ಬಿ) ಪ್ರಕಾರ ನಾಲ್ಕಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಶೇ.6ಕ್ಕಿಂತ ಹೆಚ್ಚು ಮತ ಪಡೆದರೆ ಅದನ್ನು ರಾಷ್ಟ್ರೀಯ ಪಕ್ಷ ಎಂದು ಘೋಷಿಸಬೇಕು. ಈ ಸಂಬಂಧ 2022ರ ಡಿ.19ರಂದು ಆಯೋಗಕ್ಕೆ ಕೋರಲಾಗಿತ್ತು. ನಂತರ 2023ರ ಫೆ.6, ಮಾ.8 ಮತ್ತು 15ರಂದು ಮತ್ತೆ ನೆನಪಿಸಿದರೂ ಮನವಿ ಪರಿಗಣಿಸಿಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts