More

    ಜಾತಿ ನಿಂದನೆ ಪ್ರಕರಣ; ಸಚಿವ ಸುಧಾಕರ್​ಗೆ ರಿಲೀಫ್ ನೀಡಿದ ಹೈಕೋರ್ಟ್​

    ಚಿತ್ರದುರ್ಗ: ಭೂ ಕಬಳಿಕೆ ಹಾಗೂ ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲಹಂಕ ಪೊಲೀಸ್​ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ FIRಗೆ ಹೈಕೋರ್ಟ್​​ ತಡೆಯಾಜ್ಞೆ ನೀಡಿದೆ ಎಂದು ಸಚಿವ ಡಿ. ಸುಧಾಕರ್ ತಿಳಿಸಿದ್ದಾರೆ.

    ಚಿತ್ರದುರ್ಗದಲ್ಲಿ ಈ ಕುರಿತು ಮಾತನಾಡಿದ ಸುಧಾಕರ್​, ಪ್ರಕರಣ ದಾಖಲಾದ ಮರುದಿನವೇ FIR ರದ್ದುಪಡಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ತನಿಖೆಗೆ ತಾತ್ಕಾಲಿಕ ತಡೆ ನೀಡಿದೆ ಎಂದು ಹೇಳಿದ್ದಾರೆ.

    ದೂರುದಾರರು ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ವ್ಯಾವಹಾರಿಕವಾಗಿ ಎಲ್ಲಾ ನಿಯಮ ಪಾಲನೆ ಮಾಡಿರುವುದಾಗಿ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ಧೇವೆ. ಘಟನೆ ನಡೆದಾಗ ನಾನು ಸ್ಥಳದಲ್ಲಿಯೇ ಇರಲಿಲ್ಲ. ಯಾರೋ ಕೆಲವರು ನನ್ನ ವಿರುದ್ಧ ಪಿತೂರಿ ಮಾಡಿ ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಲಾಗಿದೆ.

    ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೋರಿ ಬಿಜೆಪಿ ಪಟ್ಟು; ಅಹೋರಾತ್ರಿ ಧರಣಿಗೆ ನಿರ್ಧಾರ

    ಸಂಪುಟದಿಂದ ವಜಾ ಮಾಡುವಂತೆ ಬಿಜೆಪಿ ನಾಯಕರು ಸರ್ಕಾರಕ್ಕೆ ಆಗ್ರಹಿಸಿರುವ ಕುರಿತು ಪ್ರತಿಕ್ರಿಯಿಸಿ. 2008ರಲ್ಲಿ ನಾನು ಬಿಜೆಪಿ ಸರ್ಕಾರದಲ್ಲಿ ಸಚಿವನಾಗಿ ಪ್ರಮಾಣವಚನ ಸ್ವೀಕರಿಸಿದ ಒಂದು ವಾರದ ಬಳಿಕ ನನ್ನ ವಿರುದ್ಧ ಸಿಬಿಐ FIR ದಾಖಲಿಸಿತ್ತು. ಆಗ ಅವರು ನನ್ನನ್ನು ಸಚಿವ ಸಂಪುಟದಿಂದ ವಜಾ ಮಾಡಿದ್ರಾ ಎಂದು ಪ್ರಶ್ನಿಸಿದ್ದಾರೆ.

    ನನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರಾಜಕೀಯ ಪ್ರೇರಿತವಾಗಿದ್ದು, ಸತ್ಯಾಂಶ ತಿಳಿಯದೇ ವಿನಾಕಾರಣ ಆರೋಪ ಮಾಡಲಾಗುತ್ತಿದೆ. ಈ ಸಂಬಂಧ ಕೆಲ ಬಿಜೆಪಿ ಹಾಗೂ ಜೆಡಿಎಸ್​ನ ಸ್ನೇಹಿತರೊಂದಿಗೆ ಮಾತನಾಡಿದ್ದೇನೆ ಅವರು ಸಹ ರಾಜಕೀಯ ಉದ್ದೇಶಕ್ಕಾಗಿ ಮಾತನಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ನಾನು ಕಾನೂನನ್ನು ಗೌರವಿಸುತ್ತೇನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ ನನಗೆ ನೋಟಿಸ್​ ನೀಡಿಲ್ಲ. ಒಂದು ವೇಳೆ ನೋಟಿಸ್​ ನೀಡಿದರೆ ನಾನು ತನಿಖೆಗೆ ಸಹಕರಿಸುತ್ತೇನೆ ಎಂದು ಸಚಿವ ಡಿ. ಸುಧಾಕರ್​ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts