More

    ಕರ್ನಾಟಕ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ. ಅಂಜಾರಿಯಾ

    ನವದೆಹಲಿ: ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರು ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ

    ಇದನ್ನೂ ಓದಿ: ಆಕೆ ಮಿಸ್ ಇಂಡಿಯಾ..ವರಿಸಿದ್ದು 35ಸಾವಿರ ಕೋಟಿ ರೂ.ಆಸ್ತಿ ಒಡೆಯನನ್ನು..!

    ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಬುಧವಾರ ಶಿಫಾರಸು ಮಾಡಿದೆ.

    ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿ.ಆರ್. ಗವಾಯಿಸ್ ಜೊತೆಗಿನ ಕೊಲಿಜಿಯಂ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಅವರ ನಿಯೋಜನೆಯನ್ನು ಪ್ರಸ್ತಾಪಿಸಿದೆ.

    ಪ್ರಸ್ತುತ ಕರ್ನಾಟಕದ ಮುಖ್ಯ ನ್ಯಾಯಮೂರ್ತಿಯಾಗಿರುವ ಪಿ.ಎಸ್.ದಿನೇಶ್ ಕುಮಾರ್ ಅವರು ಇದೇ ತಿಂಗಳ 24 ರಂದು ನಿವೃತ್ತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತೆರವಾದ ಸ್ಥಾನವನ್ನು ಭರ್ತಿ ಮಾಡಲು ಕೊಲಿಜಿಯಂ ಹೊಸದಾಗಿ ಶಿಫಾರಸು ಮಾಡುತ್ತಿದೆ ಎಂದು ಬಹಿರಂಗಪಡಿಸಿದೆ.

    ನವೆಂಬರ್ 21, 2011 ರಿಂದ, ನ್ಯಾಯಮೂರ್ತಿ ಅಂಜಾರಿಯಾ ಅವರು ಗುಜರಾತ್ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

    ಆ ವಿಷಯದಲ್ಲಿ ಚರಣ್ ಬಗ್ಗೆ ಅಸೂಯೆ..ಹೀಗೇಕೆ ಅಂದರು ಉಪಾಸನಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts