More

  ಖಾಸಗಿ ಬಸ್‌ಗಳಿಗೂ ‘ಶಕ್ತಿ’: 2 ತಿಂಗಳೊಳಗೆ ಪರಿಶೀಲಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

  ಬೆಂಗಳೂರು: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿರುವ ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವ ಕುರಿತು 2 ತಿಂಗಳೊಳಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.

  ಇದನ್ನೂ ಓದಿ: ಜಪಾನ್​ ಭೂಕಂಪ; ಸಾಧ್ಯವಿರುವ ಎಲ್ಲಾ ಸಹಾಯ ನೀಡಲು ಭಾರತ ಬದ್ಧ.. ಎಂದು ಪತ್ರ ಬರೆದ ಪ್ರಧಾನಿ ಮೋದಿ 
  ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಉಡುಪಿ ಜಿಲ್ಲೆ ಕಾರ್ಕಳದ ಖಾಸಗಿ ಬಸ್ ಮಾಲೀಕ ಶರತ್‌ಕುಮಾರ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ .ಆರ್. ಕೃಷ್ಣ ಕುಮಾರ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು 2ತಿಂಗಳೊಳಗೆ ಪರಿಶೀಲಿಸಲು ಸರ್ಕಾರಕ್ಕೆ ನಿರ್ದೇಶನ ನೀಡಿ, ಅರ್ಜಿಯನ್ನು ಇತ್ಯರ್ಥಪಡಿಸಿದರು. ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದಿಸಿದರು.

  ರಾಜ್ಯದಲ್ಲಿ 16 ಜಿಲ್ಲೆಗಳಲ್ಲಿ 9 ಸಾವಿರಕ್ಕೂ ಅಧಿಕ ಖಾಸಗಿ ಬಸ್‌ಗಳು ಸಂಚರಿಸುತ್ತಿವೆ. 75 ಸಾವಿರ ಕಾರ್ಮಿಕರು ಖಾಸಗಿ ಬಸ್‌ಗಳ ಮೇಲೆ ಅವಲಂಬಿತರಾಗಿದ್ದಾರೆ. ಅಲ್ಲದೇ ಖಾಸಗಿ ಬಸ್ ಆಪರೇಟರ್‌ಗಳು ಅತಿ ಹೆಚ್ಚು ತೆರಿಗೆ ಪಾವತಿದಾರರಾಗಿದ್ದು, ವಾರ್ಷಿಕ 1,620 ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತಿದೆ. ಆದರೆ, ಶಕ್ತಿ ಯೋಜನೆ ಜಾರಿಗೆ ಬಂದ ದಿನದಿಂದ ಖಾಸಗಿ ಬಸ್ ಮಾಲೀಕರು ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ, ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ಅನ್ವಯ ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರಕ್ಕೆ 2023ರ ಜು.26ರಂದು ನೀಡಿರುವ ಮನವಿಯನ್ನು ಪರಿಗಣಿಸಲು ಆದೇಶ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.

  ಅಯೋಧ್ಯೆ ಶ್ರೀರಾಮನ ದೇವಸ್ಥಾನದ ಸುರಕ್ಷತೆಗೆ (AI) ಆಧುನಿಕ ತಂತ್ರಜ್ಞಾನದ ಕಣ್ಗಾವಲು

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts