More

    ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೆ ಮರುನಾಮಕರಣ; ವಿಚಾರಣೆ ನಡೆಸಿ ಅರ್ಜಿ ತಿರಸ್ಕರಿಸಿದ ಹೈಕೋರ್ಟ್!

    ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗಾ ಮೈದಾನಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರಿಡುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ.

    ಹುಬ್ಬಳ್ಳಿ ಧಾರವಾಡ ಪಾಲಿಕೆ ಕ್ರಮ ಪ್ರಶ್ನಿಸಿ ಹುಸೇನ್ ಎಂಬ ವ್ಯಕ್ತಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ವಾದ ಮಂಡಿಸಿದ ಸರ್ಕಾರಿ ವಕೀಲ ಎಸ್.ಎಸ್.ಮಹೇಂದ್ರ, ರಾಣಿ ಚೆನ್ನಮ್ಮ ಹೆಸರಿಡುವ ಬಗ್ಗೆ ಸಾರ್ವಜನಿಕರ ಆಕ್ಷೇಪಣೆ ಕೋರಲಾಗಿದೆ. ಆಕ್ಷೇಪಣೆ ಸ್ವೀಕರಿಸಿದ ಬಳಿಕವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು.

    ಇದನ್ನೂ ಓದಿ: ಪಾರಿವಾಳಗಳಿಗೆ ಆಹಾರ ಹಾಕಿದರೆ 500 ರೂ. ದಂಡ..!

    ಸರ್ಕಾರಿ ವಕೀಲರ ವಾದ ಆಲಿಸಿದ ವಿಭಾಗೀಯಪೀಠ, ಪಿಐಎಲ್ ಅರ್ಜಿಯನ್ನು ತಿರಸ್ಕರಿಸಿತು. ಈದ್ಗಾ ಮೈದಾನಕ್ಕೆ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರನ್ನು ಇಡುವ ಬಗ್ಗೆ ಇತ್ತೀಚಿಗೆ ನಡೆದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗಿತ್ತು. ನಂತರ ಆ ಕುರಿತು ಪ್ರಕಟಣೆ ಹೊರಡಿಸಿದ್ದ ಪಾಲಿಕೆ 30 ದಿನಗಳ ಒಳಗಾಗಿ ತಕರಾರರು ಅರ್ಜಿ ಸಲ್ಲಿಸುವಂತೆ ಸಾರ್ವಜನಿಕರಿಗೆ ಸೂಚಿಸಿತ್ತು.

    ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲ್​​; 208ರ ಮಧ್ಯೆ ಸಿಲುಕಿಕೊಂಡಿರುವ 280ನ್ನು ಗುರುತಿಸಿ!

    ರಾಣಿ ಚೆನ್ನಮ್ಮ ಹೆಸರಿಡುವ ಬಗ್ಗೆ ಎಐಎಂಐಎಂ ವಿರೋಧ ವ್ಯಕ್ತಪಡಿಸಿತ್ತು. ಹುಬ್ಬಳ್ಳಿ-ಧಾರವಾಡ ಪಾಲಿಕೆ ಕಚೇರಿ ಎದುರು ಎಐಎಂಐಎಂ ಕಾರ್ಯಕರ್ತರು ಇತ್ತೀಚೆಗೆ ಪ್ರತಿಭಟನೆಯನ್ನೂ ಮಾಡಿದ್ದಾರೆ. ಎಐಎಂಐಎಂ ಜಿಲ್ಲಾಧ್ಯಕ್ಷ ನಜೀರ್ ಅಹ್ಮದ್ ಹೊನ್ಯಾಳ್ ನೇತೃತ್ವದಲ್ಲಿ ಧರಣಿ ನಡೆದಿದ್ದು, ಹುಬ್ಬಳ್ಳಿಯ ಈದ್ದಾ ಮೈದಾನಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಹೀಗಿರುವಾಗ ಮೈದಾನದ ಹೆಸರು ಬದಲಾಯಿಸುವುದು ಸರಿಯಲ್ಲ. ರಾಜಕೀಯ ದುರುದ್ದೇಶದಿಂದ ಹೆಸರು ಬದಲಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರೋಪಿಸಲಾಗಿತ್ತು.

    ಮರುನಾಮಕರಣ ಪ್ರಕ್ರಿಯೆ ಕೈಬಿಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದರು. ಬಳಿಕ ಮೇಯರ್ ಈರೇಶ್ ಅಂಚಟಗೇರಿಗೆ ಮನವಿ ಸಲ್ಲಿಸಲಾಗಿತ್ತು. ಈಗ ಹೈ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ್ದು, ಕೋರ್ಟ್ ಆದೇಶವನ್ನು ಕಾದು ನೋಡಬೇಕಿದೆ.

    ಬಿಸ್ಲೇರಿ ಖರೀದಿಗೆ ‘ಟಾಟಾ’ ಹೇಳಿದ ಟಿಸಿಪಿಎಲ್​; ಭವಿಷ್ಯ ಮಗಳ ಕೈಯಲ್ಲಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts