ಮೈಸೂರು:ಖಾಸಗಿ ಶಾಲೆಯಲ್ಲಿ ಹೆಚ್ಚುವರಿ ಶುಲ್ಕ ಕಡಿವಾಣಕ್ಕೆ ಹಾಗೂ ವಾರ್ಷಿಕ ಶುಲ್ಕವನ್ನು ಕಂತುಗಳ ರೀತಿಯಲ್ಲಿ ಪಾವತಿಸಲು ಕರ್ನಾಟಕ ಹಿತ ರಕ್ಷಣಾ ವೇದಿಕೆ ಆಗ್ರಹಿಸಿ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಖಾಸಗಿ ಶಾಲೆಗಳಲ್ಲಿ ಪಾಲಕರಿಂದ ಹೆಚ್ಚುವರಿಯಾಗಿ ಶುಲ್ಕ ಸಂಗ್ರಹಿಸುತ್ತಿದ್ದು, ಸಂಗ್ರಹಿಸುವ ಶುಲ್ಕ ಹಾಗೂ ಶಾಲಾ ಮಂಡಳಿ ನಿಗದಿಪಡಿಸಿರುವ ಶುಲ್ಕವನ್ನು ಸೂಚನಾ ಫಲಕ, ಶಾಲೆಯ ವೆಬ್‌ಸೈಟ್‌ನಲ್ಲಿ ಮೊದಲೇ ಪ್ರಕಟಿಸಬೇಕು ಎಂದು ವೇದಿಕೆ ಅಧ್ಯಕ್ಷ ವಿನಯ್ ಕುಮಾರ್ ಒತ್ತಾಯಿಸಿದರು.
ಶಾಸಗಿ ಶಾಲೆಗಳಿಗೆ ಶುಲ್ಕ ನಿಗದಿಪಡಿಸುವ ಸಂಪೂರ್ಣ ಅಧಿಕಾರವಿದ್ದು, ಅದನ್ನು ಪ್ರಶ್ನಿಸುವುದಿಲ್ಲ. ಅವರು ಎಷ್ಟೇ ಶುಲ್ಕ ನಿಗದಿಪಡಿಸಿದರೂ ಕಟ್ಟಲು ಸಿದ್ಧ. ಆದರೆ ಅದನ್ನು ಮೊದಲೇ ಪ್ರಕಟಿಸಬೇಕು. ಅದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಯ ಅನುಮತಿ ಪಡೆದುಕೊಳ್ಳಬೇಕು ಎಂಬ ನಿಯಮವನ್ನು ಯಾವ ಶಾಲೆಗಳೂ ಪಾಲಿಸುತ್ತಿಲ್ಲ. ಆದ್ದರಿಂದ ಎಲ್ಲ ಶಾಲೆಗಳೂ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಶುಲ್ಕವನ್ನು ಕಂತಿನಲ್ಲಿ ಪಾವತಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ವೇದಿಕೆಯ ಮಂಜುನಾಥ್, ಎಸ್.ಎನ್. ರಾಜೇಶ್, ರವಿಚಂದ್ರ, ಗುರುರಾಜ್ ಶೆಟ್ಟಿ, ಪ್ರಮೋದ್‌ಗೌಡ ಇತರರಿದ್ದರು.
