More

    ತುಮಕೂರಿನಲ್ಲಿ ಒಂದೇ ಕುಟುಂಬದ ಐದು ಮಂದಿ ಆತ್ಮಹತ್ಯೆ ಪ್ರಕರಣ; ಐವರು ಪೊಲೀಸ್ ವಶಕ್ಕೆ: ಸಚಿವ ಪರಮೇಶ್ವರ್

    ತುಮಕೂರು: ಸಾಲಬಾಧೆ ತಾಳಲಾರದೆ ನಗರದಲ್ಲಿ ನಿನ್ನೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುನ್ನ ಗರೀಬ್‌ಸಾಬ್‌ ಎಂಬುವವರು ಡೆತ್ ನೋಟ್ ಬರೆದಿಟ್ಟು, ವಿಡಿಯೋ ಸಹ ಮಾಡಿದ್ದರು.

    ನಿನ್ನೆ ನಡೆದಂತಹ ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರಿಂದು‌ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ, ಮೃತರ ಕುಟುಂಬದ ಸದಸ್ಯರನ್ನು ಭೇಟಿ‌ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

    ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದ ಪರಮೇಶ್ವರ್ ಅವರು, ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

    ಗರೀಬ್‌ಸಾಬ್‌ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ ಐದು ಜನರನ್ನು ವಶಕ್ಕೆ ಪಡೆಯಲಾಗಿದೆ. ಆತ್ಮಹತ್ಯೆಯ ಹಿಂದೆ ಬಡ್ಡಿ ವ್ಯವಹಾರ ಇದೆ ಎಂದು ಜನರು ಮಾತನಾಡುತ್ತಿದ್ದಾರೆ. ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು, ಬಡ್ಡಿ ವ್ಯವಹಾರ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುತ್ತೇವೆ. ತನಿಖೆಯ ನಂತರ ಆತ್ಮಹತ್ಯೆಗೆ ಕಾರಣ ತಿಳಿಯಲಿದೆ ಎಂದರು.

    ಅಮಾಯಕರಿಗೆ ಸಾಲ ಕೊಟ್ಟು ಬಡ್ಡಿ ಪಡೆಯುವುದು ಜಾಸ್ತಿಯಾಗಿದೆ. ಮೀಟರ್ ಬಡ್ಡಿ ಮಾಡುವರ, ದಂಧೆ ನಡೆಸುವವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ಇಂತಹ ಘಟನೆ ಮರುಕಳಿಸಬಾರದು. ಇದನ್ನು ತಡೆಯುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪರಮೇಶ್ವರ್ ತಿಳಿಸಿದರು.

    ಬಡವರ ಮೇಲೆ ದೌರ್ಜನ್ಯ: ಡೆತ್​ನೋಟ್​ ಬರೆದಿಟ್ಟು ಒಂದೇ ಕುಟುಂಬದ ಐದು ಮಂದಿ ಸಾವಿಗೆ ಶರಣು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts