More

    ಸೋಮವಾರದಿಂದ ಮೂರು ದಿನ ಅಧಿವೇಶನ; ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ

    ಬೆಂಗಳೂರು: 16ನೇ ವಿಧಾನಸಭೆ ರಚನೆ ಹಾಗೂ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರದ ಉದ್ದೇಶದಿಂದ ಸೋಮವಾರ, ಮಂಗಳವಾರ ಹಾಗೂ ಬುಧವಾರ ವಿಧಾನಸಭೆ ಅಧಿವೇಶನ ಕರೆಯಲು ಸಂಪುಟ ಸಭೆ ನಿರ್ಧರಿಸಿದೆ. ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ಪ್ರಮಾಣವಚನ ಬೋಧಿಸಲಿದ್ದು, ಇದೇ ಸಂದರ್ಭದಲ್ಲಿ ನೂತನ ಸ್ಪೀಕರ್ ಆಯ್ಕೆ ಆಗಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಜುಲೈನಲ್ಲಿ ಬಜೆಟ್ ಮಂಡನೆ

    ಮೊದಲ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಹಿಂದಿನ ವಿಧಾನಸಭೆಯ ಅವಧಿ ಮೇ 23ಕ್ಕೆ ಕೊನೆಗೊಳ್ಳಲಿದ್ದು, ಅಷ್ಟರೊಳಗಾಗಿ ಶಾಸಕರ ಪ್ರಮಾಣವಚನ ಸ್ವೀಕಾರ ಪೂರ್ಣಗೊಳ್ಳಬೇಕಿದೆ. ಜುಲೈ ತಿಂಗಳಿನಲ್ಲಿ ಮೊದಲ ಬಜೆಟ್ ಮಂಡಿಸಲಾಗುವುದು. ಅಂತೆಯೇ ಚುನಾವಣೆಯ ಸಂದರ್ಭದಲ್ಲಿ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳಿಗೆ ಹಾಗೂ ಸರ್ಕಾರದ ನೂತನ ಯೋಜನೆ, ಕಾರ್ಯಕ್ರಮಗಳಿಗೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.

    ಇದನ್ನೂ ಓದಿ: ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ

    ಮುಂದಿನ ಸಚಿವ ಸಂಪುಟ ಸಭೆ ಬಳಿಕ ಜನರಿಗೆ ‘ಗ್ಯಾರಂಟಿ’ ಯೋಜನೆ ಲಭ್ಯ

    ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಐದು ಪ್ರಮುಖ ಭರವಸೆಗಳಿಗೆ ಮೊದಲ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕವಾಗಿ ಒಪ್ಪಿಗೆ ನೀಡಿದ್ದು, ವಿಸ್ತೃತವಾಗಿ ಯೋಜನೆ ರೂಪಿಸಿದ ನಂತರ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು ಜಾರಿಗೆ ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

    ಇದನ್ನೂ ಓದಿ: ಸಮಾಜವಾದಿ ತತ್ವದ ಸಿದ್ಧರಾಮಯ್ಯ ರಬ್ಬರ್ ಸ್ಟ್ಯಾಂಪ್ ಸಿಎಂ ಆಗಿದ್ದಾರೆ: ನಳಿನ್ ಕುಮಾರ್ ಕಟೀಲ್

    ಮೊದಲ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 200 ಯೂನಿಟ್ ವಿದ್ಯುತ್, ಮನೆ ಒಡತಿಗೆ 2,000 ರೂ, ಯುವ ನಿಧಿಯಡಿ ಪದವೀಧರರಿಗೆ ಮಾಸಿಕ 3,000 ರೂ, ಡಿಪ್ಲೊಮಾ ವ್ಯಾಸಂಗ ಮಾಡಿದವರಿಗೆ 1,500 ರೂ, ಮಹಿಳೆಯರಿಗೆ ಉಚಿತ ಬಸ್ ಪಾಸ್ ಭರವಸೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. ಯಾವುದೇ ಸಾಲದ ಸುಳಿಗೆ ಸಿಲುಕದೆ ಭರವಸೆ ಈಡೇರಿಸುತ್ತೇವ ಎಂದು ಸಿದ್ದರಾಮಯ್ಯ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts