More

    ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾ ದಾಳಿ; ಬಿ.ವೈ.ವಿಜಯೇಂದ್ರ ಪತ್ನಿಯ ಸಹೋದರನ ಮನೆ‌ ಮೇಲೂ‌ ರೇಡ್‌

    ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು (ಡಿ.5) ಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. 63 ಕಡೆ 13 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಸುಮಾರು 200ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

    ಬೆಂಗಳೂರಿನಲ್ಲಿ ಮೂರು ಕಡೆ ದಾಳಿ
    ಬೆಸ್ಕಾಂ ಜಾಗೃತ ದಳ ಅಧಿಕಾರಿ ಟಿಎನ್. ಸುಧಾಕರ್ ರೆಡ್ಡಿ ಮನೆ, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್​​​.ಎಸ್​​.ಕೃಷ್ಣಮೂರ್ತಿ ಮನೆ ಹಾಗೂ ಕುಂಬಳಗೂಡು-ಕಣಿಮಿಣಿಕೆ ಬಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧಿಕಾರಿ ಮನೆ ಮೇಲೆ ದಾಳಿ ನಡೆಸಲಾಗಿದೆ.

    ಮೈಸೂರಿನ ವಿವಿಧ ಕಡೆಗಳಲ್ಲಿ ಪರಿಶೀಲನೆ
    ಮೈಸೂರಿನಲ್ಲೂ ಲೋಕಾಯುಕ್ತ ಕಾರ್ಯಾಚರಣೆ ನಡೆಸಿದ್ದು, ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮೇಲೆ ದಾಳಿ ಮಾಡಿ, ಗುರುಕುಲ ಬಡಾವಣೆ ನಿವಾಸ ಸೇರಿ ವಿವಿಧ ಕಡೆ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕೂ ಮೀರಿ ಅಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಹಾಗೂ ಐ ಜಿ ಪಿ, ಸುಬ್ರಮಣ್ಣೀಶ್ವರ ರಾವ್ ಎಸ್. ಪಿ ಸುರೇಶ್ ಬಾಬು ಮಾರ್ಗದರ್ಶ‌ನದಲ್ಲಿ ಡಿಎಸ್‌ಪಿ, ಕೃಷ್ಣಯ್ಯ ನೇತೃತ್ವದಲ್ಲಿ  ವಿವಿಧ ಕಡೆಗಳಲ್ಲಿ ಪರಿಶೀಲನೆ ನಡೆದಿದೆ. 

    ಬಳ್ಳಾರಿ, ವಿಜಯನಗರದಲ್ಲಿ ಏಕಕಾಲಕ್ಕೆ ದಾಳಿ
    ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿ ಏಕಕಾಲಕ್ಕೆ ಲೋಕಯುಕ್ತ ದಾಳಿಯಾಗಿದೆ. ಬಳ್ಳಾರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಚಂದ್ರಶೇಖರ, ಅರಣ್ಯ ಇಲಾಖೆಯ ಡಿಆರ್ ಎಫ್ ಓ ಮಾರುತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಚಂದ್ರಶೇಖರ ಅವರ ಹೊಸಪೇಟೆ ಮನೆ ಮತ್ತು ಮಾರುತಿ ಅವರ ಕಂಪ್ಲಿ ಮತ್ತು ಗಂಗಾವತಿ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದಾರೆ. ಬೀದರ್ ನ ಪಶು ವೈಧ್ಯಕೀಯ ವಿಶ್ವವಿದ್ಯಾಲಯದ ನೌಕರರ ಸುನೀಲ್ ಕುಮಾರ್ ಮನೆ ಹಾಗೂ ಕಾಂಪ್ಲೆಕ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. 

    ವಿಜಯೇಂದ್ರ ಪತ್ನಿಯ ಸಹೋದರನ ಮನೆ‌ ಮೇಲೆ‌ ಲೋಕ ದಾಳಿ
    ಇನ್ನು ಮುಖ್ಯವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ನಿಯ ಸಹೋದರನ ಮನೆ‌ ಮೇಲೆ‌ ಲೋಕಾಯುಕ್ತ ದಾಳಿಯಾಗಿದೆ. ಡಾ ಪ್ರಭಲಿಂಗ ಮಾನಕರ್ ಯಾದಗಿರಿ ಡಿಎಚ್ ಓ ಆಗಿರುವ ಡಾ ಪ್ರಭುಲಿಂಗ್ ಮಾನಕರ್‌ ಅವರ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ನಿವಾಸದಲ್ಲಿ ಶೋಧ ನಡೆಸಿದ್ದಾರೆ. 

    ಕಾವಾಡಿಗರ ವಿಡಿಯೋ ವೈರಲ್: ‘ಅರ್ಜುನ’ನ ಸಾವಿನ ಸುತ್ತ ಅನುಮಾನದ ಹುತ್ತ… ಅರಣ್ಯ ಇಲಾಖೆ ಸಿಬ್ಬಂದಿ ಮತ್ತೊಂದು ಎಡವಟ್ಟು ಬಯಲು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts