More

    ರಷ್ಯಾ ಯುದ್ಧದಲ್ಲಿ ಕನ್ನಡಿಗರು: ಯುವಕರ ರಕ್ಷಣೆಗೆ ವಿದೇಶಾಂಗ ಇಲಾಖೆ ಸಂಪರ್ಕಿಸುತ್ತಿದ್ದೇವೆ ಎಂದ ಪ್ರಿಯಾಂಕ್ ಖರ್ಗೆ

    ಬೆಂಗಳೂರು: ರಷ್ಯಾದ ಪೌರತ್ವ ಮತ್ತು ದೊಡ್ಡ ಸಂಬಳದ ಆಮಿಷ ಒಡ್ಡಿ ಕರ್ನಾಟಕ ಮೂಲದ ಯುವಕರನ್ನು ರಷ್ಯಾ-ಉಕ್ರೇನ್ ಯುದ್ಧಕ್ಕೆ ಬಳಸಿಕೊಂಡ ಆರೋಪ ಕೇಳಿಬಂದಿದೆ. ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ನಮ್ಮ ಜಿಲ್ಲಾಧಿಕಾರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಲಬುರಗಿ ಜಿಲ್ಲೆಯ ಮೂವರು ಯುವಕರು ರಷ್ಯಾಕ್ಕೆ ಹೋಗಿದ್ದ ಮಾಹಿತಿ ಇದೆ ಎಂದರು.

    ಇಂದು (ಫೆ.22) ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಷ್ಯಾ ಸೇನೆಯು ಅಮಾಯಕ ಯುವಕರನ್ನು ಯುದ್ಧಕ್ಕೆ ಬಳಸಿಕೊಂಡಿದೆ. ಈ ಮಾಹಿತಿಯನ್ನು ನಮ್ಮ ಜಿಲ್ಲಾಧಿಕಾರಿ ನೀಡಿದ್ದಾರೆ ಎಂದರು.

    ಉನ್ನತ ಹುದ್ದೆ ಪಡೆಯಲು ತೆರಳಿದ್ದ ಯುವಕರನ್ನು ಯುದ್ಧಕ್ಕೆ ಬಳಸಿಕೊಂಡ ಮಾಹಿತಿ ಇದೆ. ರಷ್ಯಾದ ವ್ಯಾಗ್ನರ್​​ ಗ್ರೂಪ್​ಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂಬ ಮಾಹಿತಿ ಇದೆ. ಕರ್ನಾಟಕ ಮಾತ್ರವಲ್ಲದೆ, ತೆಲಂಗಾಣ, ಉತ್ತರ ಭಾರತದ ಯುವಕರು ಸಿಲುಕಿರುವ ಮಾಹಿತಿ ಇದೆ. ಈ ವಿಚಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಮನಕ್ಕೆ ತಂದಿದ್ದು, ವಿದೇಶಾಂಗ ಸಚಿವರ ಜೊತೆ ಮಾತನಾಡುವಂತೆ ಮನವಿ ಮಾಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು. 

    ರಷ್ಯಾಕ್ಕೆ ಉದ್ಯೋಗಕ್ಕೆ ತೆರಳಿ ಯುದ್ಧದಲ್ಲಿ ಬಳಕೆಯಾಗಿರುವ ರಾಜ್ಯ ಹಾಗೂ ದೇಶದ ಯುವಕರನ್ನು ಕೇಂದ್ರ ಸರ್ಕಾರ ರಕ್ಷಣೆ ಮಾಡಬೇಕಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು. 

    ‘ದಯವಿಟ್ಟು ರಕ್ಷಿಸಿ, ನಮ್ಮ ಪ್ರಾಣ ಅಪಾಯದಲ್ಲಿದೆ’; ರಷ್ಯಾದಿಂದ ಬಲವಂತವಾಗಿ ವ್ಯಾಗ್ನರ್ ಸೇನೆಗೆ ಸೇರ್ಪಡೆಗೊಂಡ ಕನ್ನಡಿಗರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts