ಹಿಂದುಳಿದ ವರ್ಗಗಳ ಕೈಗಾರಿಕೋದ್ಯಮಿಗಳಿಗಾಗಿ ಪ್ರತ್ಯೇಕ ನಿಧಿ ಸ್ಥಾಪಿಸಲು ಸಿಎಂ, ಡಿಸಿಎಂಗೆ ಸಚಿವ ಲಾಡ್ ಮನವಿ! Santosh Lad

santosh lad
Published on

Santosh Lad: ಹಿಂದುಳಿದ ವರ್ಗಗಳ ಯುವ ಕೈಗಾರಿಕೋದ್ಯಮಿಗಳನ್ನು ಪ್ರೋತ್ಸಾಹಿಸಲು, ವಿಶೇಷ ನಿಧಿ ಸ್ಥಾಪಿಸುವಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಜುಲೈ 26 ರಂದು ಪತ್ರ ಬರೆದಿರುವ ಲಾಡ್, 2015ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ದತ್ತಾಂಶವನ್ನು ಉಲ್ಲೇಖಿಸಿ, ಕರ್ನಾಟಕದ ಜನಸಂಖ್ಯೆಯಲ್ಲಿ 70 ರಷ್ಟು ಜನರು ಒಬಿಸಿಗಳಿದ್ದಾರೆ. ಪ್ರತ್ಯೇಕ ಅನುದಾನದ ವ್ಯವಸ್ಥೆ ಇಲ್ಲದ ಕಾರಣ ಹಿಂದುಳಿದ ವರ್ಗಗಳ ಯುವಕರು ಕೈಗಾರಿಕಾ ವಲಯದ ಕುರಿತು ನಿರಾಸಕ್ತಿ ಹೊಂದಿದ್ದಾರೆ. ಸರ್ಕಾರದ ಮಟ್ಟದಲ್ಲಿ ಪ್ರತ್ಯೇಕ ನಿಧಿಯನ್ನು ಸ್ಥಾಪಿಸುವುದು ಅನಿವಾರ್ಯವಾಗಿದೆ ಎಂದಿದ್ದಾರೆ.

ರಾಜ್ಯದ ಕೈಗಾರಿಕಾ ಕ್ಷೇತ್ರದಲ್ಲಿ ಪ್ರಾತಿನಿಧ್ಯ ಮತ್ತು ಅವಕಾಶದಲ್ಲಿನ ಅಂತರವನ್ನು ಕಡಿಮೆ ಮಾಡಲು ಇಂತಹ ನಿಧಿ ಸಹಾಯ ಮಾಡಬಹುದೆಂದು ಅವರು ತಿಳಿಸಿದ್ದಾರೆ.

ಸರ್ಕಾರ ಮತ್ತು ಖಾಸಗಿ ವಲಯಗಳು ಈ ಪ್ರತ್ಯೇಕ ನಿಧಿಗೆ ಆರ್ಥಿಕವಾಗಿ ಬೆಂಬಲ ನೀಡಬಹುದು ಎಂದಿರುವ ಸಚಿವ ಲಾಡ್, ಈ ವಿಧಾನವನ್ನು ಅಳವಡಿಸಿಕೊಂಡು ಉದ್ಯಮಿಗಳು ರಾಜ್ಯದ ಆರ್ಥಿಕತೆಗೆ ತಮ್ಮದೇ ಆದ ಕೊಡುಗೆ ನೀಡಬಹುದು ಎಂದು ಸಲಹೆ ನೀಡಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net