More

    ತಪ್ಪಾಯ್ತು ಅಂದ್ರೂ ಬಿಡ್ಲಿಲ್ಲ: ಬಹರೈನ್​ನಲ್ಲಿ ಸ್ಟೇಟಸ್​ ಹಾಕಿ ಕೆಲಸ ಕಳ್ಕೊಂಡ ಕರ್ನಾಟಕದ ಡಾಕ್ಟರ್!

    ಬೆಂಗಳೂರು: ಇಸ್ರೇಲ್​ನಲ್ಲಿನ ಯುದ್ಧ ಪರಿಸ್ಥಿತಿಗೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾ ಎಕ್ಸ್​ನಲ್ಲಿ ಸ್ಟೇಟಸ್​ ಹಾಕಿದ್ದ ಕರ್ನಾಟಕ ಮೂಲದ ವೈದ್ಯರೊಬ್ಬರು ಕೊನೆಗೆ ಸ್ಟೇಟಸ್​ ಡಿಲೀಟ್ ಮಾಡಿ ಕ್ಷಮೆ ಯಾಚಿಸಿದರೂ ಉದ್ಯೋಗ ಕಳೆದುಕೊಳ್ಳುವಂತಾಗಿದೆ.

    ಡಾ.ಸುನೀಲ್ ಜೆ. ರಾವ್ ಎಂಬ ಈ ವೈದ್ಯರು ಬಹರೈನ್​ನ ದ ರಾಯಲ್ ಬಹರೈನ್ ಆಸ್ಪತ್ರೆಯಲ್ಲಿ ವೃತ್ತಿಯಲ್ಲಿದ್ದು, ಪ್ಯಾಲೆಸ್ತೀನಿಯರ ವಿರುದ್ಧ ಎಕ್ಸ್​ನಲ್ಲಿ ಸ್ಟೇಟಸ್ ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

    ಇದನ್ನೂ ಓದಿ: ಐಸ್​ ಕ್ರೀಮ್​ ಟ್ರಕ್​ಗಳಲ್ಲಿ ಶವ!: ಹೊರಗೆ ಮಕ್ಕಳು ಐಸ್ ​​ಕ್ರೀಮ್ ಮೆಲ್ಲುವ ಚಿತ್ರ, ಒಳಗೆ ಮೃತದೇಹಗಳು!

    ಡಾ.ಸುನಿಲ್ ರಾವ್ ಸ್ಟೇಟಸ್ ಅವರ ವೈಯಕ್ತಿಕ ಅಭಿಪ್ರಾಯ. ಅದಕ್ಕೂ ಆಸ್ಪತ್ರೆಗೂ ಸಂಬಂಧವಿಲ್ಲ. ಅದಾಗ್ಯೂ ಅವರು ಸಮಾಜಕ್ಕೆ ಅಪರಾಧ ಅನಿಸುವಂಥ ಸ್ಟೇಟಸ್ ಹಾಕಿರುವುದರಿಂದ ತಕ್ಷಣವೇ ಜಾರಿಗೆ ಬರುವಂತೆ ಅವರನ್ನು ಉದ್ಯೋಗದಿಂದ ತೆಗೆಯಲಾಗಿದೆ ಎಂದು ದ ರಾಯಲ್ ಬಹರೈನ್ ಆಸ್ಪತ್ರೆ ತಿಳಿಸಿದೆ.

    ನನ್ನ ಮಾತು ಮತ್ತು ಕಾರ್ಯಗಳಿಗಾಗಿ ನಾನು ತೀವ್ರವಾಗಿ ವಿಷಾದಿಸುತ್ತೇನೆ. ನಾನು ಈ ವೇದಿಕೆಯಲ್ಲಿ ಪೋಸ್ಟ್ ಮಾಡಿದ ಹೇಳಿಕೆಗಾಗಿ ಕ್ಷಮೆಯಾಚಿಸಲು ಬಯಸುತ್ತೇನೆ. ಪ್ರಸ್ತುತ ಘಟನೆಯ ಸಂದರ್ಭದಲ್ಲಿ ಇದು ಸಂವೇದನಾರಹಿತವಾಗಿತ್ತು. ವೈದ್ಯನಾಗಿ ಹೇಳುತ್ತೇನೆ, ಎಲ್ಲ ಜೀವಗಳು ಮುಖ್ಯ ಎಂಬುದಾಗಿ ಡಾ.ಸುನೀಲ್ ಎಕ್ಸ್​ನಲ್ಲಿ ಕ್ಷಮೆ ಯಾಚಿಸಿದ್ದರು. ಅಲ್ಲದೆ ನಾನು ಕಳೆದ ಹತ್ತು ವರ್ಷಗಳಿಂದ ಇಲ್ಲಿದ್ದು, ಈ ದೇಶ, ದೇಶದ ಜನರು ಮತ್ತು ಧರ್ಮವನ್ನು ಗೌರವಿಸುತ್ತೇನೆ ಎಂಬುದಾಗಿ ಅವರು ಹೇಳಿಕೊಂಡಿದ್ದಾರೆ. ಅದಾಗ್ಯೂ ಅವರ ಸ್ಟೇಟಸ್​ ಬಗ್ಗೆ ಕೆಲವರೂ ಇನ್ನೂ ಕೋಪ ವ್ಯಕ್ತಪಡಿಸುತ್ತಿದ್ದಾರೆ.

    ಅರಿಶಿನ-ಕುಂಕುಮ ಬಳಸದೆ ಆಯುಧಪೂಜೆ ಮಾಡಿ: ಸರ್ಕಾರದಿಂದ ಹೊಸ ಆದೇಶ

    ಪೆಟ್ರೋಲ್ ಬಂಕ್​ಗಳಲ್ಲಿನ ಮೋಸ ತಪ್ಪಿಸಲು ಸರ್ಕಾರಕ್ಕೆ ಹೊಸ ಬೇಡಿಕೆ: ವಿಡಿಯೋ ವೈರಲ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts