More

    ಧಾರ್ಮಿಕ ಭಾವನೆಗೆ ಧಕ್ಕೆ; ಚೇತನ್ ವಿರುದ್ಧ ಮತ್ತೊಂದು ಕೇಸ್ ದಾಖಲು

    ಬೆಂಗಳೂರು: ಚಿತ್ತೀಚೆಗೆ ಬಿಡುಗಡೆಯಾಗಿ, ದೇಶದಾದ್ಯಂತ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾದಲ್ಲಿ ತೋರಿಸಲಾಗಿರುವ ಭೂತಕೋಲ ಸಂಪ್ರದಾಯದ ಬಗ್ಗೆ ಅವಹೇಳನಕಾರಿಯಾಗಿ ನಟ ಚೇತನ್ ಮಾತನಾಡಿದ್ದರು. ಚೇತನ್ ಪ್ರತಿಕ್ರಿಸುತ್ತಿದ್ದಂತೆ, ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಚೇತನ್ ವಿರುದ್ಧ ರಾಜ್ಯದ ನಾನಾ ಕಡೆಗಳಲ್ಲಿ ಅನೇಕ ಜನರು ಹಾಗೂ ಸಂಘಟನೆಗಳನ್ನು ದೂರು ನೀಡಿದ್ದವು.

    ಇದೀಗ ನಟ ಚೇತನ್ ನೀಡಿರುವ ಹೇಳಿಕೆಗಳ ಆರೋಪದ ಮೇಲೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬೆಂಗಳೂರಿನಲ್ಲಿ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.

    ಶಂಕರಪುರಂನ ಶಿವಕುಮಾರ್ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಚೇತನ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ಚೇತನ್ ಅವರನ್ನು ವಿಚಾರಣೆಗೆ ಕರೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts