More

    ಅಪರಾಧ ಪತ್ತೆಯಲ್ಲಿ ಕರ್ನಾಟಕ ಪೊಲೀಸ್ ಹೆಸರುವಾಸಿ

    ರಾಯಚೂರು: ಅಪರಾಧ ತಡೆಗಟ್ಟುವಲ್ಲಿ ಹಾಗೂ ಕಂಡು ಹಿಡಿಯುವಲ್ಲಿ ದೇಶದಲ್ಲಿ ಕರ್ನಾಟಕ ರಾಜ್ಯದ ಪೊಲೀಸರು ಹೆಸರುವಾಸಿಯಾಗಿದ್ದಾರೆ ಎಂದು ನಿವೃತ್ತ ಆರಕ್ಷಕ ಉಪ ನಿರೀಕ್ಷಕ ಚಂದ್ರಶೇಖರ ಹೇಳಿದರು.
    ಸ್ಥಳೀಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸೋಮವಾರ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಪೊಲೀಸ್ ಇಲಾಖೆಯಿಂದ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲಾಗುತ್ತಿದೆ ಎಂದರು.
    ಹಿಂದೆ ಇಲಾಖೆಯಲ್ಲಿ ಯಾವುದೇ ಆಧುನಿಕ ತಂತ್ರಜ್ಞಾನ ಇಲ್ಲದಿದ್ದಾಗ ಇಲಾಖೆ ಅಕಾರಿಗಳು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಸ್ತುತ ದಿನಮಾನದಲ್ಲಿ ಪೊಲೀಸ್ ಇಲಾಖೆಗೆ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಇನ್ನೂ ಹೆಚ್ಚಿನ ರೀತಿಯಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ.
    ಇಲಾಖೆಯಿಂದ ನಿವೃತ್ತ ಪೊಲೀಸರಿಗೆ ಆರೋಗ್ಯ ಭಾಗ್ಯ ಯೋಜನೆಯಡಿ ವೈದ್ಯಕೀಯ ಸೌಲಭ್ಯ ಒದಗಿಸಲಾಗುತ್ತಿದ್ದು, ನಿವೃತ್ತ ಪೊಲೀಸ್ ಕುಟುಂಬಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಜತೆಗೆ ಆರೋಗ್ಯ ಭದ್ರತೆ ದೊರೆತಂತಾಗಿದೆ ಎಂದು ತಿಳಿಸಿದರು.
    ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಬಿ.ನಿಖಿಲ್ ಮಾತನಾಡಿ, ಇಲಾಖೆ ಅಕಾರಿಗಳು ಮತ್ತು ಸಿಬ್ಬಂದಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿರಿತರಾಗಿರುತ್ತಾರೆ. 2023-24ನೇ ಸಾಲಿನಲ್ಲಿ ಆರೋಗ್ಯ ಭಾಗ್ಯ ಯೋಜನೆಯಡಿ ಒಟ್ಟು 247 ನಿವೃತ್ತ ಪೊಲೀಸ್ ಅಕಾರಿ, ಸಿಬ್ಬಂದಿಗಳಿಗೆ ವೈದ್ಯಕೀಯ ಚಿಕಿತ್ಸೆ ಒದಗಿಸಲಾಗಿದ್ದು, 58 ನಿವೃತ್ತ ಸಿಬ್ಬಂದಿಗೆ ವೈದ್ಯಕೀಯ ಚಿಕಿತ್ಸೆಗಾಗಿ 8 ಲಕ್ಷ ರೂ. ಪಾವತಿಸಲಾಗಿದೆ.
    ಎಂಟು ನಿವೃತ್ತರಿಗೆ 80 ಸಾವಿರ ರೂ., ಸಿಬ್ಬಂದಿ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 8.41 ಲಕ್ಷ ರೂ. ಸಹಾಯಧನ ಸೇರಿದಂತೆ ಇನ್ನಿತರ ಕಲ್ಯಾಣ ಕಾರ್ಯಕ್ರಮಕ್ಕಾಗಿ ಒಟ್ಟು 11.10 ಲಕ್ಷ ರೂ.ಗಳನು ಪಾವತಿಸಲಾಗಿದೆ ಎಂದು ಬಿ.ನಿಖಿಲ್ ತಿಳಿಸಿದರು.
    ಈ ಸಂದರ್ಭದಲ್ಲಿ 70 ವರ್ಷ ಮೇಲ್ಪಟ್ಟ ನಿವೃತ್ತ 29 ಸಿಬ್ಬಂದಿಗಳಿಗೆ ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಕಾರಿಗಳಾದ ಡಾ.ಆರ್.ಶಿವಕುಮಾರ, ಹರೀಶ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts