2 ವರ್ಷ ಕಳೆಯಲಿ, ಮತ್ತೆ 8 ವರ್ಷ ಡಿಕೆಶಿ ಸಿಎಂ; ಭವಿಷ್ಯ ನುಡಿದ ಜ್ಯೋತಿಷಿ!

D. K. Shivakumar
Published on

ಬೆಂಗಳೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡಿದ್ದರೂ, ಐದು ವರ್ಷಗಳ ಕಾಲ ಆಡಳಿತ ನಡೆಸುವುದಿಲ್ಲ. ಲೋಕಸಭಾ ಚುನಾವಣೆಯ ಬಳಿಕ ಉಪ ಮುಖ್ಯಮಂತ್ರಿಯಾಗಿರುವ ಡಿ.ಕೆ.ಶಿವಕುಮಾರ್ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳುತ್ತಾರೆ. ಈ ಬಗ್ಗೆ ಹೈಕಮಾಂಡ್ ವಲಯದಲ್ಲಿ ಈಗಾಗಲೇ ಮಾತುಕತೆ ನಡೆದಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹೆಚ್ಚು ಚರ್ಚೆಯಲ್ಲಿವೆ.

ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ ಬರುತ್ತಿದ್ದಂತೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಸಿಎಂ ಸ್ಥಾನಕ್ಕಾಗಿ ಜಿದ್ದಿಗೆ ಬಿದ್ದಿದ್ದರು. ಈ ಸಂದರ್ಭದಲ್ಲಿ ಇಬ್ಬರು ನಾಯಕರನ್ನು ಮನವೋಲಿಸುವುದೇ ಹೈಕಮಾಂಡ್​ಗೆ ಭಾರೀ ತಲೆನೋವಾಗಿತ್ತು. ಅಂತಿಮವಾಗಿ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ನೀಡಿತು. ಲೋಕಸಭಾ ಚುನಾವಣೆಯ ಬಳಿಕೆ ಡಿಕೆಶಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕು ಎಂಬ ಚರ್ಚೆಯಾಗಿದೆ ಎನ್ನಲಾಗಿತ್ತು.

ಇದೀಗ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದು, ಡಿ.ಕೆ.ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಹೇಳಿದ್ದಾರೆ. ಡಿಸಿಎಂ ಆಗಿ ಸದ್ಯ ಅಧಿಕಾರ ವಹಿಸಿಕೊಂಡಿರುವ ಡಿಕೆಶಿ ಅವರಿಗೆ ನಿಯೋಜನೆಯಾಗಿರುವ ವಿಧಾನಸೌಧದ ಕೊಠಡಿ ಸಂಖ್ಯೆ 336ರಲ್ಲಿ ಮುಂದಿನ ಗುರುವಾರ ಪೂಜೆ ನೆರವೇರಲಿದೆ. ಜಾತಕ ಫಲದ ಪ್ರಕಾರ ಮುಹೂರ್ತ ನೀಡಿರುವ ಜ್ಯೋತಿಷಿ ಬಿಬಿ ಆರಾಧ್ಯ ಆರಾಧ್ಯ, ಅಭಿಜಿನ್ ಲಗ್ನದಲ್ಲಿ ಪೂಜೆ ನೆರವೇರಿಸಲು ಸೂಚನೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಸದ್ಯ ವಾಸ್ತವ್ಯ ಹೂಡಿರುವ ಸರ್ಕಾರಿ ನಿವಾಸವನ್ನು ವಾಸ್ತವ್ಯಕ್ಕೆ ಆಯ್ಕೆ ಮಾಡಿಕೊಳ್ಳುವಂತೆ ಡಿಕೆಶಿಗೆ ಜ್ಯೋತಿಷಿ ಬಿಬಿ ಆರಾಧ್ಯ ಸಲಹೆ ನೀಡಿದ್ದಾರೆ. ಅಲ್ಲದೆ ಎರಡು ವರ್ಷಗಳ ಬಳಿಕ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಎಂಟು ವರ್ಷಗಳ ಕಾಲ ಆಡಳಿತ ನಡೆಸುತ್ತೀರಿ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net