ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಗರಣದ ಕಾವು ತೀವ್ರಗೊಂಡಿರುವ ಹೊತ್ತಿನಲ್ಲೇ ಮೂರು ದಿನದ ಹಿಂದೆ ಮೂವರು ಸಚಿವರು ಸಭೆ ನಡೆಸಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು.
ಇದನ್ನೂ ಓದಿ: Manipur: ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಪೊಲೀಸ್ ಠಾಣೆಗೆ ನುಗ್ಗಿ ಶಸ್ತ್ರಾಸ್ತ್ರ ದೋಚಿದ ಗುಂಪು!
ಇದೀಗ ಈ ಬೆಳವಣಿಗೆ ಮುಂದುವರಿದ ಭಾಗ ಎಂಬಂತೆ ಸಚಿವ ಸತೀಶ್ ಜಾರಕಿಹೊಳಿ ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿ ರಾಜ್ಯ ರಾಜಕಾರಣದ ವಿವಿಧ ವಿಚಾರ ಚರ್ಚೆ ನಡೆಸಿದ್ದಾರೆ. ಇಡಿ ತನಿಖೆ ಆರಂಭ, ಕಾನೂನು ಹೋರಾಟ, ಪ್ರತಿಪಕ್ಷದ ನಡೆ ಕುರಿತು ಚರ್ಚೆ ನಡೆಸಿದ್ದಾರೆ.
ಮೂರು ದಿನದ ಹಿಂದಷ್ಟೆ ಗೃಹ ಸಚಿವಾರದ ಜಿ. ಪರಮೇಶ್ವರ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹದೇವಪ್ಪ ಹಾಗೂ ಲೋಕೋಪಯೋಗಿ ಸಚಿವ ಸತೀಸ ಜಾರಕಿಹೊಳಿ ಸತೀಶ್ ಜಾರಕಿಹೊಳಿ ರಹಸ್ಯ ಸಭೆ ನಡೆಸಿದ್ದರು.
ಒಂದೊಮ್ಮೆ ಮುಡ ಪ್ರಕರಣದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭ ಎದುರಾದರೆ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದವರಿಗೆ ಸಿಎಂ ಸ್ಥಾನ ಸಿಗಬೇಕೆಂಬ ಲೆಕ್ಕಾಚಾರದಲ್ಲಿ ಈ ಸಭೆ ನಡೆದಿತ್ತೆಂದು ಕಾಂಗ್ರೆಸ್ ವಲಯದಲ್ಲಿ ಚರ್ಚೆ ಇದೆ. ಈನಡುವೆ ಈಸಭೆಯ ಸಂದೇಶದೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಖರ್ಗೆಯವರನ್ನು ಭೇಟಿ ಮಾಡಿದ್ದಾರೆಂಬ ಮಾತುಗಳು ಕೇಳಿಬಂದಿವೆ.
ಈ ನಡುವೆ ಪ್ರತಿಕ್ರಿಯೆ ನೀಡಿರುವ ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆಗೆ ಬಲವಾಗಿ ನಿಲ್ಲಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹಾದೇವಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ ಚರ್ಚೆಯಾಗಿದೆ. ನಮ್ಮಲ್ಲಿರುವುದು ಪ್ಲಾನ್ ಎ ಅಷ್ಟೇ, ಪ್ಲಾನ್ ಬಿ ಇಲ್ಲವೇ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಸ ಜಾರಕಿಹೊಳಿ ಹೇಳಿದರು.