21.7 C
Bengaluru
Tuesday, January 21, 2020

ಕೆಪಿಎಲ್ ವೇಳಾಪಟ್ಟಿ ಪರಿಷ್ಕೃತ: ಬೆಂಗಳೂರಿನಲ್ಲಿ 15, ಮೈಸೂರಿನಲ್ಲಿ 10 ಪಂದ್ಯ, 31ರಂದು ಫೈನಲ್

Latest News

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಮುಂಬೈ ಸಿದ್ಧಿವಿನಾಯಕನಿಗೆ 35 ಕಿಲೋ ಚಿನ್ನ | ದೆಹಲಿ ಮೂಲದ ಉದ್ಯಮಿಯ ಕಾಣಿಕೆಯ ಮೌಲ್ಯ 14 ಕೋಟಿ ರೂಪಾಯಿ!

ಮುಂಬೈ: ಕಳೆದ 200ಕ್ಕೂ ಹೆಚ್ಚು ವರ್ಷಗಳ ಅವಧಿಯಲ್ಲಿ ಮುಂಬೈ ಸಿದ್ಧಿವಿನಾಯಕ ದೇವರಿಗೆ ಇದೇ ಮೊದಲ ಬಾರಿಗೆ 35 ಕಿಲೋ ಚಿನ್ನ ಕಾಣಿಕೆ ರೂಪದಲ್ಲಿ...

ಬೆಂಗಳೂರು: ಭಾರಿ ಮಳೆ ಮತ್ತು ಪ್ರವಾಹ ಪರಿಸ್ಥಿತಿಯಿಂದಾಗಿ ಹುಬ್ಬಳ್ಳಿ ಚರಣ ರದ್ದುಗೊಂಡ ಬಳಿಕ ಕರ್ನಾಟಕ ಪ್ರೀಮಿಯರ್ ಲೀಗ್ 8ನೇ ಆವೃತ್ತಿಯ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್​ಸಿಎ) ಭಾನುವಾರ ಬಿಡುಗಡೆಗೊಳಿಸಿದೆ. ಹೊಸ ವೇಳಾಪಟ್ಟಿಯ ಅನ್ವಯ ಬೆಂಗಳೂರಿನಲ್ಲಿ 15 ಮತ್ತು ಮೈಸೂರಿನಲ್ಲಿ ಪ್ಲೇಆಫ್ ಸಹಿತ 10 ಪಂದ್ಯಗಳು ನಡೆಯಲಿವೆ.

ಆಗಸ್ಟ್ 16ರಿಂದ 23ರವರೆಗೆ ಬೆಂಗಳೂರು ಚರಣದ ಪಂದ್ಯಗಳು ನಡೆಯಲಿದ್ದರೆ, ಆಗಸ್ಟ್ 25ರಿಂದ 31ರವರೆಗೆ ಬೆಂಗಳೂರಿನಲ್ಲಿ ಪಂದ್ಯಗಳು ನಡೆಯಲಿವೆ. ಈ ಹಿಂದೆ ನಿಗದಿಯಾಗಿದ್ದಂತೆಯೇ ಆಗಸ್ಟ್ 16ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಮತ್ತು ಮೈಸೂರು ವಾರಿಯರ್ಸ್ ತಂಡಗಳ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ. 7 ತಂಡಗಳು ಲೀಗ್ ಹಂತದಲ್ಲಿ ತಲಾ ರೌಂಡ್ ರಾಬಿನ್ ಮಾದರಿಯಲ್ಲಿ ತಲಾ ಒಮ್ಮೆ ಮುಖಾಮುಖಿ ಆಗಲಿದ್ದು, ಅಗ್ರ 4 ತಂಡಗಳು ಪ್ಲೇಆಫ್ ಹಂತಕ್ಕೇರಲಿವೆ.

ಈ ಹಿಂದಿನ ವೇಳಾಪಟ್ಟಿಯ ಅನ್ವಯ ಬೆಂಗಳೂರು ಮತ್ತು ಮೈಸೂರಿನಲ್ಲಿ ತಲಾ 9 ಮತ್ತು ಹುಬ್ಬಳ್ಳಿಯಲ್ಲಿ 7 ಪಂದ್ಯಗಳು ನಿಗದಿಯಾಗಿದ್ದವು. ಕಳೆದ ವರ್ಷದ ಕೆಪಿಎಲ್ ಟೂರ್ನಿಯನ್ನು 4.28 ಕೋಟಿ ಜನರು ವೀಕ್ಷಿಸಿದ್ದರು. ಇದು ಹಿಂದಿನ ಆವೃತ್ತಿಗಿಂತ ಶೇ. 17ರಷ್ಟು ಏರಿಕೆಯಾಗಿತ್ತು. ಮಳೆಯಿಂದ ಹುಬ್ಬಳ್ಳಿ ಚರಣ ರದ್ದುಪಡಿಸುವುದಕ್ಕೆ ಮುನ್ನ ಹೋಟೆಲ್ ಸಮಸ್ಯೆಯಿಂದಾಗಿ ಶಿವಮೊಗ್ಗದಲ್ಲಿ ಲೀಗ್ ಆಯೋಜಿಸುವ ಯೋಜನೆಯನ್ನು ಕೆಎಸ್​ಸಿಎ ಕೈಬಿಟ್ಟಿತ್ತು. ರಾಷ್ಟ್ರೀಯ ತಂಡ ಮತ್ತು ದುಲೀಪ್ ಟ್ರೋಫಿ ಟೂರ್ನಿಗಳಲ್ಲಿ ಆಡುತ್ತಿರುವ ಕೆಲ ಪ್ರಮುಖ ಆಟಗಾರರು ಕೆಪಿಎಲ್​ಗೆ ಅಲಭ್ಯರಾಗಿದ್ದಾರೆ.

ಟೂರ್ನಿಯಲ್ಲಿ ವಿಜೇತ ತಂಡ 10 ಲಕ್ಷ ರೂ. ಬಹುಮಾನ ಪಡೆಯಲಿದೆ. ರನ್ನರ್​ಅಪ್ ತಂಡ 5 ಲಕ್ಷ ರೂ. ಮತ್ತು 3, 4 ಸ್ಥಾನ ಪಡೆದ ತಂಡಗಳು ತಲಾ 2.5 ಲಕ್ಷ ರೂ. ಪಡೆಯಲಿವೆ.

ಒಂದು ದಿನ ಬೇಗ ಫೈನಲ್

ಪರಿಷ್ಕೃತ ವೇಳಾಪಟ್ಟಿಯ ಅನ್ವಯ ಟೂರ್ನಿ 1 ದಿನ ಮುಂಚಿತವಾಗಿಯೇ ಮುಕ್ತಾಯ ಕಾಣಲಿದೆ. ಸೆಪ್ಟೆಂಬರ್ 1ರಂದು ನಿಗದಿಯಾಗಿದ್ದ ಫೈನಲ್ ಇದೀಗ ಆಗಸ್ಟ್ 31ರಂದೇ ನಡೆಯಲಿದೆ. ಬೆಂಗಳೂರು ಚರಣದ ಮುಕ್ತಾಯದ ಬಳಿಕ ಆಗಸ್ಟ್ 24ರಂದು ಟೂರ್ನಿಯ ವಿಶ್ರಾಂತಿ ದಿನವಾಗಿರುತ್ತದೆ.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...