More

    ರಾಜ್ಯದಲ್ಲಿ ವರುಣಾರ್ಭಟ; ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು/ಕೊಡಗು/ಉಡುಪಿ: ರಾಜ್ಯಾದ್ಯಂತ ರಣಭೀಕರ ಮಳೆ ಸುರಿಯುತ್ತಿದ್ದು, ದಕ್ಷಿಣ ಕ‌ನ್ನಡ ಮತ್ತು ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಎರಡು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

    ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಅದರಲ್ಲೂ ದ.ಕ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ವರುಣನ ಅಬ್ಬರ ಮಿತಿ ಮೀರಿದೆ. ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜುಲೈ 8 ಮತ್ತು 9 ರಂದು ರಜೆ ಘೋಷಿಸಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

    ಕೊಡಗು ಜಿಲ್ಲೆಯಲ್ಲಿ ಒಂದು ದಿನ ರಜೆ: ಅದೇ ರೀತಿ ಕೊಡಗು ಜಿಲ್ಲೆಯಲ್ಲೂ ಸಹ ಧಾರಾಕಾರ ಮಳೆ ಸುರಿಯುತ್ತಿದ್ದು, ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

    ನಾಳೆ ಸಿಎಂ ಸಭೆ: ರಾಜ್ಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಈ ನಿಟ್ಟಿನಲ್ಲಿ ನಾಳೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಂಬಂಧಪಟ್ಟ ಅಧಿಕಾರಿಗಳ ಜತೆ ಮಧ್ಯಾಹ್ನ 2:30ಕ್ಕೆ ಸಿಎಂ ಸಭೆ ನಡೆಸಲಿದ್ದಾರೆ. ಇನ್ನು 3 ದಿನ 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

    ಹತ್ಯೆಯಾದ ಕನ್ಹಯ್ಯ ಲಾಲ್ ಮಕ್ಕಳಿಗೆ ಸರ್ಕಾರಿ ಉದ್ಯೋಗ: ಮುಖ್ಯಮಂತ್ರಿ ಗೆಹ್ಲೋಟ್​ ಘೋಷಣೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts