ಸಿನಿಮಾ

ಸೈಕ್ಲೋನ್‌ ಎಫೆಕ್ಟ್; ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆ

ಬೆಂಗಳೂರು: ಸೈಕ್ಲೋನ್ ಪರಿಣಾಮ ರಾಜ್ಯದಲ್ಲಿ ಮುಂದಿನ ಎರಡು ದಿನ ಗುಡುಗು ಮಿಂಚು ಸಹಿತ ಧಾರಾಕಾರವಾಗಿ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮೂನ್ಸೂಚನೆ ನೀಡಿದೆ. ಗುರುವಾರ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಹಾಗೂ ಬೆಳಗಾವಿ ಸೇರಿ ರಾಜ್ಯದ ಕೆಲ ಭಾಗಗಳಲ್ಲಿ ವರ್ಷಧಾರೆಯಾಗಿದೆ.

ಇದನ್ನೂ ಓದಿ: ಏಕನಾಥ್​ ಸಿಂಧೆ ಬಣಕ್ಕೆ ಸುಪ್ರೀಂಕೋರ್ಟ್​ನಿಂದ ಬಿಗ್​ ರಿಲೀಫ್​: ಉದ್ಧವ್​ ಠಾಕ್ರೆ ಬಣಕ್ಕೆ ನೈತಿಕ ಗೆಲುವು  

ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ

ಸೈಕ್ಲೋನ್‌ನಿಂದ ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಹೆಚ್ಚಾಗಿ ಮಳೆ ಬೀಳುವ ಸಾಧ್ಯತೆ ಇತ್ತು. ಇದರಿಂದ ಮತದಾನದ ಮೇಲೆ ಪರಿಣಾಮ ಬೀರುವ ಆತಂಕ ಎದುರಾಗಿತ್ತು. ಆದರೆ, ಹವಾಮಾನದಲ್ಲಿ ದಿಢೀರ್ ಬದಲಾವಣೆಯಾದ ಹಿನ್ನೆಲೆಯಲ್ಲಿ ಅಷ್ಟಾಗಿ ರಾಜ್ಯದಲ್ಲಿ ಪರಿಣಾಮ ಬೀರಲ್ಲ. 

ಇದನ್ನೂ ಓದಿ: ಫಲಿತಾಂಶಕ್ಕೂ ಮುನ್ನವೇ ಚಾಮುಂಡೇಶ್ವರಿ ಕ್ಷೇತ್ರದ ಸೋಲೊಪ್ಪಿಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ!

ಮುಂದಿನ ಎರಡು ದಿನ ಮಳೆ

ಆದರೂ ಮುಂದಿನ 48 ಗಂಟೆ ಕೆಲವೆಡೆ ಮಳೆ ಸುರಿಯಲಿದೆ. ಬೆಂಗಳೂರು, ಬೆಂ. ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮೇ 12 ಮತ್ತು ಮೇ 13ರಂದು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರಿನಲ್ಲಿ ಮುಂದಿನ 24 ಗಂಟೆ ತುಸು ಜೋರಾಗಿ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Latest Posts

ಲೈಫ್‌ಸ್ಟೈಲ್