ಕರ್ನಾಟಕ ರಾಜ್ಯ ರೈತ ಸಂಘವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ ೧೫ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ : ಜಿ.ಎ.ಲಕ್ಷ್ಮೀನಾರಾಯಣ ಗೌಡ

ಮೈಸೂರು: ಕರ್ನಾಟಕ ರಾಜ್ಯ ರೈತ ಸಂಘವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ ೧೫ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವುದಾಗಿ ಸಂಘದ ಅಧ್ಯಕ್ಷ ಜಿ.ಎ. ಲಕ್ಷ್ಮೀನಾರಾಯಣ ಗೌಡ ತಿಳಿಸಿದರು.

ಹಾವೇರಿಯಲ್ಲಿ ಫೆ.26ರಂದು ನಡೆಯುವ ರಾಜ್ಯ ಸಮಿತಿ ಸಭೆಯಲ್ಲಿ ಯಾವ್ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಅನುಕೂಲವಾಗುತ್ತದೆ ಎಂಬುದನ್ನು ಚರ್ಚಿಸಿ, ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.