Rajyasabha Election: ಶುರುವಾದ ಮತದಾನ; ಮೊದಲು ಮತ ಚಲಾಯಿಸಿದ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್

ವಿಧಾನಸೌಧ
Published on

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯಸಭಾ ಚುನಾವಣೆಗೆ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದೆ.

ರಾಜ್ಯಸಭೆಯ ಒಟ್ಟು ನಾಲ್ಕು ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ರಾಜಾಜಿನಗರ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಮೊದಲು ಮತದಾನ ಮಾಡಿದ್ದಾರೆ.

ಸದ್ಯ ಕಾಂಗ್ರೆಸ್ ಶಾಸಕರು ತಮ್ಮ ಅಭ್ಯರ್ಥಿ ಪರ ಮತಹಾಕಿಸಲೆಂದು ಬಿಜೆಪಿ-ಜೆಡಿಎಸ್ ನಾಯಕರು ಕಸರತ್ತು ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಚುನಾವಣಾ ಕಣದಲ್ಲಿ
ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್​​​​ನಿಂದ ಡಾ. ಸೈಯದ್ ನಾಸಿರ್ ಹುಸೇನ್, ಅಜಯ್ ಮಕೇನ್, ಜಿ.ಸಿ.ಚಂದ್ರಶೇಖರ್, ಬಿಜೆಪಿಯಿಂದ ನಾರಾಯಣಸಾ ಭಾಂಡಗೆ ಹಾಗೂ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ. ಸಂಜೆ ವೇಳೆಗೆ ಫಲಿತಾಂಶ ತಿಳಿಯಲಿದೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net