More

    ಆರೋಗ್ಯ ಸೇವೆಯಲ್ಲಿ ಇಡೀ ದೇಶಕ್ಕೆ ಕರ್ನಾಟಕಕ್ಕೆ ಮೊದಲ ಸ್ಥಾನ: ಡಿಸಿಎಂ ಡಿ.ಕೆ. ಶಿವಕುಮಾರ್​

    ಬೆಂಗಳೂರು: ಆರೋಗ್ಯ ಸೇವೆಯಲ್ಲಿ ಇಡೀ ದೇಶಕ್ಕೆ ಕರ್ನಾಟಕ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ದೇಶದಲ್ಲಿ ನಮ್ಮ ರಾಜ್ಯದಲ್ಲಿರುವ ಆರೋಗ್ಯ ವ್ಯವಸ್ಥೆ ಹಾಗೂ ಮೆಡಿಕಲ್ ಕಾಲೇಜುಗಳ ಸಂಖ್ಯೆ ಬೇರೆಲ್ಲೂ ಇಲ್ಲ. ದೇಶಕ್ಕೆ ಹೆಚ್ಚು ವೈದ್ಯರನ್ನು ನೀಡುತ್ತಿರುವ ರಾಜ್ಯ ಕರ್ನಾಟಕ. ಈ ವಿಚಾರದಲ್ಲಿ ಕರ್ನಾಟಕ ದೇಶಕ್ಕೆ ಮಾದರಿಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಹೇಳಿದರು.

    108 ಆರೋಗ್ಯ ಕವಚ 262 ತುರ್ತು ಆಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿದರು.

    70ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳು ನಮ್ಮ ರಾಜ್ಯದಲ್ಲಿದ್ದು, 10 ಸಾವಿರಕ್ಕೂ ಹೆಚ್ಚು ವೈದ್ಯರನ್ನು ತಯಾರು ಮಾಡುತ್ತಿದ್ದೇವೆ. ಇಡೀ ಪ್ರಪಂಚದ ವಿವಿಧ ಭಾಗಗಳಲ್ಲಿ ನಮ್ಮ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. ಪ್ರತಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಇರುವ ನಮ್ಮ ವ್ಯವಸ್ಥೆಯನ್ನು ಪರಿಗಣಿಸಿ ಬೇರೆ ರಾಜ್ಯಗಳು ಅದನ್ನು ಅನುಕರಣೆ ಮಾಡುತ್ತಿವೆ. ಇದರ ಜತೆಗೆ ನಮ್ಮಲ್ಲಿ ಅತಿ ಹೆಚ್ಚು ಖಾಸಗಿ ಮೆಡಿಕಲ್ ಕಾಲೇಜುಗಳು ಇವೆ. ಮೆಡಿಕಲ್ ಕಾಲೇಜುಗಳ ಮಾದರಿಯಲ್ಲಿ ಪ್ಯಾರಾಮೆಡಿಕಲ್ ಮತ್ತು ನರ್ಸಿಂಗ್ ಕಾಲೇಜುಗಳು ನಮ್ಮ ರಾಜ್ಯದಲ್ಲೇ ಹೆಚ್ಚಾಗಿವೆ.

    ಇಂದು 108 ಆಂಬ್ಯುಲೆನ್ಸ್ ಸೇವೆಗೆ ಹೊಸ ದಿಕ್ಕು ತೋರಲು ಆಧುನಿಕ ತಂತ್ರಜ್ಞಾನ ಅಳವಡಿಸಲು 262 ನೂತನ ಆಂಬ್ಯುಲೆನ್ಸ್​ಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಆರೋಗ್ಯ ಮಂತ್ರಿಗಳು ಹಾಗೂ ಕಾರ್ಯದರ್ಶಿಗಳಿಗೆ ಒಂದು ಮನವಿ ಮಾಡುತ್ತೇನೆ. 108 ಆಂಬ್ಯುಲೆನ್ಸ್ ಚಾಲಕರು ಖಾಸಗಿ ಆಸ್ಪತ್ರೆಗಳ ಜತೆ ಒಳ ಒಪ್ಪಂದ ಮಾಡಿಕೊಂಡು ನಮ್ಮ ಕನಕಪುರ, ಮಳವಳ್ಳಿ, ಚಾಮರಾಜನಗರ ಭಾಗದಲ್ಲಿ ಯಾವುದೇ ಆಪಘಾತವಾದರೂ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ತೆಗೆದುಕೊಂಡು ಹೋಗುತ್ತಾರೆ. ನಮ್ಮ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸಾ ವ್ಯವಸ್ಥೆ ಇದ್ದರೂ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಾರೆ. ನಂತರ ಅವರ ಬಿಲ್​ಗಳು ದುಬಾರಿಯಾಗಿ ಶಾಸಕರ ಬಳಿ ಸಹಾಯ ಕೇಳಿಕೊಂಡು ಬರುತ್ತಾರೆ. ನಾವು ಶಾಸಕರು ಮುಖ್ಯಮಂತ್ರಿಗಳ ಬಳಿ ಪರಿಹಾರ ಕೇಳಬೇಕಾಗುತ್ತದೆ. ನಾವು ನಮ್ಮ ಜೇಬಿನಿಂದಲೂ ಹಣ ನೀಡಬೇಕಾಗುತ್ತದೆ. ಕೆಲವೊಮ್ಮೆ ಈ ರೀತಿ ತಿಂಗಳಿಗೆ 20 ಲಕ್ಷದ ವರೆಗೂ ನೀಡಬೇಕಾಗುತ್ತದೆ. ಹೀಗಾಗಿ ನೀವು ಯಾರಿಗೆ ಈ ಆಂಬ್ಯುಲೆನ್ಸ್ ಚಾಲಕರು ಹಾಗೂ ಇದರ ಗುತ್ತಿಗೆ ನೀಡಿರುತ್ತೀರಿ ಅವರಿಗೆ ಸರಿಯಾದ ತರಬೇತಿ ನೀಡಿ ಅವರು ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ಕರೆದೊಯ್ಯುವಂತೆ ಮಾಡಬೇಕು. ಈ ಕಾರಣಕ್ಕೆ ನಾನು ಕನಕಪುರಕ್ಕೆ ಮೆಡಿಕಲ್ ಕಾಲೇಜು ನೀಡಿ ಎಂದು ಪದೇ ಪದೆ ಒತ್ತಾಯ ಮಾಡುತ್ತಿರುತ್ತೇನೆ ಎಂದರು.

    ನಮ್ಮ ಬೌರಿಂಗ್ ಆಸ್ಪತ್ರೆ, ಬೆಂಗಳೂರು ಮೆಡಿಕಲ್ ಕಾಲೇಜು, ವಿಕ್ಟೋರಿಯಾ ಆಸ್ಪತ್ರೆಗಳು ಉತ್ತಮ ಗುಣಮಟ್ಟದ ಚಿಕಿತ್ಸಾ ವ್ಯವಸ್ಥೆ ಹೊಂದಿದೆ. ನಾನು ಈ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದೇನೆ. ಚಾಲಕರುಗಳಿಗೆ ಹೊಣೆಗಾರಿಕೆ ನೀಡಬೇಕು, ಅವರ ವಾಹನಕ್ಕೆ ಜಿಪಿಎಸ್ ಅಳವಡಿಸಬೇಕು. ಅಪಘಾತಗೊಂಡಾಗ ಗಾಯಾಳುಗಳು ಅವರ ಸಂಬಂಧಿಕರು ಗಾಬರಿಯಲ್ಲಿ ಖಾಸಗಿ ಆಸ್ಪತ್ರೆಗೆ ಹೋಗುತ್ತಾರೆ. ಈ ವಿಚಾರದಲ್ಲಿ ಅಧಿಕಾರಿಗಳು ಗಮನಹರಿಸಬೇಕು ಎಂದು ಹೇಳಿದರು.

    ನಮ್ಮ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಎಲ್ಲಾ ಸರ್ಕಾರಗಳ ಪ್ರಯತ್ನದಿಂದ ನಮ್ಮ ಆರೋಗ್ಯ ವ್ಯವಸ್ಥೆ ದೇಶಕ್ಕೆ ಮಾದರಿಯಾಗಿದೆ. ಮಾನವ ಸೇವೆ ಬಹಳ ಉತ್ತಮವಾಗಿ ಆಗುತ್ತಿದೆ. ನಮ್ಮ ಎಲ್ಲಾ ರೀತಿಯ ಸಹಕಾರ ಆರೋಗ್ಯ ಇಲಾಖೆಗೆ ಇದೆ. ನಿಮಗೆ ಶುಭವಾಗಲಿ ಎಂದರು.

    ಮುಂಬೈ ಹೋಟೆಲ್​ನಲ್ಲಿ ಆ ಕರಾಳ ರಾತ್ರಿ! ಪ್ರವಾಸದ ಮಧ್ಯೆ ಕಾಶ್ಮೀರದ 500 ವಿದ್ಯಾರ್ಥಿನಿಯರಿಗೆ ಕಾದಿತ್ತು ಆಘಾತ

    ಚಿತ್ರೀಕರಣದ ವೇಳೆ ಕಾಲು ಜಾರಿ ಬಿದ್ದ ನಟ ಮಂಡ್ಯ ರಮೇಶ್‌ಗೆ ತೀವ್ರಗಾಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts