More

    ರಾಜ್ಯಕ್ಕೆ ಕೇಂದ್ರದಿಂದ 30 ಸಾವಿರ ಕೋರ್ಬಿವ್ಯಾಕ್ಸ್ ಲಸಿಕೆ

    ಮುನ್ನೆಚ್ಚರಿಕೆ ಡೋಸ್ ಆಗಿ ನೀಡಲು ಜಿಲ್ಲೆ ಮತ್ತು ತಾಲೂಕು ಆಸ್ಪತ್ರೆಗಳಿಗೆ ವಿತರಣೆ

    ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಡಿ. 31ರಂದು 30 ಸಾವಿರ ಡೋಸ್ ಕೋರ್ಬಿವ್ಯಾಕ್ಸ್ ಲಸಿಕೆ ಸರಬರಾಜಾಗಿದ್ದು, ಈ ಲಸಿಕೆಗಳನ್ನು ಅವಶ್ಯಕತೆಗಳಿಗೆ ಅನುಸಾರವಾಗಿ ಜಿಲ್ಲೆಗಳಿಗೆ ಸರಬರಾಜು ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

    ಈ ಲಸಿಕೆಯನ್ನು ಕೇಂದ್ರದ ಮಾರ್ಗಸೂಚಿಯಂತೆ ವಿಜಾತಿ (ಹೆಟೆರೊಲಾಗಸ್) ಮುನ್ನೆಚ್ಚರಿಕೆ ಡೋಸ್ ಆಗಿ ನೀಡಬಹುದಾಗಿದ್ದು, ತಾಂತ್ರಿಕ ಸಲಹಾ ಸಮಿತಿ ಶಿಾರಸ್ಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2ನೇ ಡೋಸ್ ಪಡೆದು 6 ತಿಂಗಳು ಹಾಗೂ 26 ವಾರಗಳು ಪೂರೈಸಿ ಮುನ್ನೆಚ್ಚರಿಕಾ ಡೋಸ್ ಪಡೆದ 60 ವರ್ಷ ಮೇಲಟ್ಟವರಿಗೆ, ಕಡಿಮೆ ರೋಗ ನಿರೋಧಕ ಶಕ್ತಿ ಇರುವವರಿಗೆ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ನೀಡಬಹುದಾಗಿದೆ.

    ಇದಕ್ಕಾಗಿ ಅರ್ಹರ ಪಟ್ಟಿಯನ್ನು ಕೋವಿನ್ ಪೋರ್ಟಲ್‌ನಿಂದ ಡೌನ್ ಲೋಡ್ ಮಾಡಿಕೊಂಡು ಹಂಚಿಕೆಯಾದ ಕೋರ್ಬಿವ್ಯಾಕ್ಸ್ ಲಸಿಕೆಯನ್ನು ಬಳಸಿ ಕೋವಿಡ್ ಲಸಿಕಾಕರಣದ ಮಾರ್ಗಸೂಚಿ ಅನ್ವಯ ಲಸಿಕೆ ನೀಡಲು ಇಲಾಖೆ ಸೂಚಿಸಿದೆ. ಈ ಸಂಬಂಧ ಜಿಲ್ಲಾ ಮತ್ತು ನಿರ್ಣಯಿಸಲಾದ ತಾಲೂಕು ಆಸ್ಪತ್ರೆಗಳಿಗೆ ಮಾತ್ರ ಲಸಿಕೆ ಹಂಚಿಕೆ ಮಾಡಲಾಗಿದ್ದು, ಅಲ್ಲಿ ಮಾತ್ರ ಲಸಿಕಾಕರಣ ಹಮ್ಮಿಕೊಳ್ಳಲಾಗುವುದು. ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts