ಜ.11ರಂದು KKRTC ಯಿಂದ ನೇರ ಸಂದರ್ಶನಕ್ಕೆ ಆಹ್ವಾನ

bus
Published on

ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ(KKRTC)ವು ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 11ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಒಟ್ಟು ಹುದ್ದೆ: 133

ಹುದ್ದೆಗಳ ವಿವರ
ಆಟೋ ಮೆಕಾನಿಕ್ 46
ಆಟೋ ಎಲೆಕ್ಟ್ರಿಷಿಯನ್ 28
ಆಟೋ ವೆಲ್ಡರ್ 20
ಆಟೋ ಬಾಡಿ ಫಿಟ್ಟರ್ 20
ಆಟೋ ಪೇಂಟರ್ 10
ಆಟೋ ಮೆಷಿನಿಸ್ಟ್ 9

ವಿದ್ಯಾರ್ಹತೆ
ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ, ವೇತನ
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಡಿಸೆಂಬರ್ 31, 2023ಕ್ಕೆ ಕನಿಷ್ಠ 18 ವರ್ಷ - ಗರಿಷ್ಠ 40 ವರ್ಷದೊಳಗಿರಬೇಕು. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನಿಯಮಾನುಸಾರ ಅಭ್ಯರ್ಥಿಗಳಿಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ
ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪ್ರಮಾಣಪತ್ರ, ಮೆರಿಟ್ ಪಟ್ಟಿಯ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ
ಕರ್ನಾಟಕದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಪ್ರೆಂಟಿಸ್ ಪೋರ್ಟಲ್ ಟ್ಟಛ್ಞಿಠಿಜ್ಚಿಛಿಜಿಜ್ಞಿಜಿ.ಜಟ.ಜ್ಞಿ ಮೂಲಕ ನೋಂದಾಯಿಸಿಕೊಳ್ಳಬೇಕು. ನಂತರ ಅಗತ್ಯ ದಾಖಲೆಗಳೊಂದಿಗೆ Kalyana Karnataka Road Transport Corporation, Divisional Offie, Raichur Division, Raichur ಈ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ kkrtc.karnataka.gov.in
ಸಂದರ್ಶನ ನಡೆಯುವ ದಿನ: 11-01-2024 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net