ಮಂಡ್ಯ: ಕರ್ನಾಟಕ ಸಂಘದ ವತಿಯಿಂದ ನ.11ರಂದು ನಗರದ ಸ್ವಾಮಿ ವಿವೇಕಾನಂದ ರಂಗಮಂದಿರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ್‌ಗೌಡ ತಿಳಿಸಿದರು.
ಅಂದು ಸಂಜೆ 4 ಗಂಟೆಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಕೊಮ್ಮೇರಹಳ್ಳಿ ಮಠದ ಪುರುಷೋತ್ತಮಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮಾಜಿ ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾಧಿಕಾರಿ ಡಾ.ಕುಮಾರ ಸಂಚಿಕೆ ಬಿಡುಗಡೆ ಮಾಡುವರು. ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಸಂಘದ ಕಾರ್ಯದರ್ಶಿ ಚಂದಗಾಲು ಲೋಕೇಶ್, ನಿರ್ದೇಶಕರಾದ ಮಂಜುಳಾ ಉದಯಶಂಕರ್, ಜಯರಾಮು, ಶಿವರಾಜು ಇದ್ದರು.
ನ.11ರಂದು ನಗರದಲ್ಲಿ ಪ್ರಶಸ್ತಿ ಪ್ರದಾನ: ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ್‌ಗೌಡ ಹೇಳಿಕೆ
You Might Also Like
ಕೂದಲು ಬಿಳಿಯಾಗುವುದನ್ನು ತಡೆಯುವುದೇಗೆ ಎಂಬ ಚಿಂತೆಯೇ?; ಇಲ್ಲಿದೆ ಸಿಂಪಲ್ ವಿಧಾನ | Health Tips
10 ವರ್ಷದಿಂದ 25 ರಿಂದ 30 ರವರೆಗೆ ಇಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಅಕಾಲಿಕ ಬಿಳಿ ಕೂದಲಿನಿಂದ…
ನೀವು ಈ ನಕ್ಷತ್ರದಲ್ಲಿ ಹುಟ್ಟಿದ್ದೀರಾ? ಹಾಗಾದ್ರೆ ಈ ಡಿಸೆಂಬರ್ ತಿಂಗಳಲ್ಲಿ ನಿಮ್ಮ ಅದೃಷ್ಟ ಖುಲಾಯಿಸಲಿದೆ! Birth of Stars
Birth of Stars : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ…
ರಾಗಿಮುದ್ದೆಯಿಂದ ಇಷ್ಟೆಲ್ಲಾ ಪ್ರಯೋಜನ ಇದ್ಯಾ!; ತಿಳಿದ್ರೆ ನಿಮ್ಮ ದೈನಂದಿನ ಆಹಾರಕ್ರಮದಲ್ಲಿ ಮಿಸ್ ಮಾಡೋದೆ ಇಲ್ಲ | Health Tips
ಚಳಿಗಾಲವು ಆರಂಭವಾಗಿದ್ದು ಭವಿಷ್ಯದಲ್ಲಿ ಈ ಬಾರಿ ಹಿಂದಿನ ವರ್ಷಗಳಿಗಿಂತ ತೀವ್ರ ಚಳಿ ಇರುತ್ತದೆ. ಇತ್ತೀಚಿನ ದಿನಗಳಲ್ಲಿ…