ಕೆಲಸದ ಅವಧಿ ಹೆಚ್ಚಿಸಿರುವ ಆದೇಶ ಹಿಂಪಡೆಯಲಿ: ಕರ್ನಾಟಕ ಶ್ರಮಿಕ ಶಕ್ತಿ ರಾಜ್ಯಾಧ್ಯಕ್ಷ ವರದರಾಜೇಂದ್ರ ಒತ್ತಾಯ

Karnataka Shramika Shakti Press Conference Mandya
Published on

ಮಂಡ್ಯ: ಕಾರ್ಮಿಕ ವಿರೋಧಿ ನಾಲ್ಕು ಲೇಬರ್ ಕೋಡ್ ಜಾರಿ ವಿರೋಧಿಸಿ ಹಾಗೂ ಕೆಲಸದ ಅವಧಿ 8ರಿಂದ 12 ಗಂಟೆಗಳಿಗೆ ಹೆಚ್ಚಿಸಿರುವುದನ್ನು ಹಿಂಪಡೆಯಬೇಕು ಎಂದು ಕರ್ನಾಟಕ ಶ್ರಮಿಕ ಶಕ್ತಿ ರಾಜ್ಯಾಧ್ಯಕ್ಷ ವರದರಾಜೇಂದ್ರ ಆಗ್ರಹಿಸಿದರು.

ಕಾರ್ಮಿಕರ ಬೇಡಿಕೆಗಳನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರವು ಕಾರ್ಮಿಕ ವಿರೋಧಿ ನಾಲ್ಕು ಕಾರ್ಮಿಕ ಸಂಹಿತೆಗಳ ಜಾರಿಗೊಳಿಸಿ, ಅವುಗಳಲ್ಲಿ 29 ಕಾನೂನು ರೂಪಿಸಿರುವುದನ್ನು ವಿರೋಧಿಸಿ ಚರ್ಚೆ ನಡೆಸಲು ಉದ್ದೇಶಿಸಿ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕಾರ್ಮಿಕ ದಿನಾಚರಣೆ ಅಂಗವಾಗಿ ಮೇ 31ರಂದು ಬೆಳಗ್ಗೆ 10.30ಕ್ಕೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಹಲವು ವಿಚಾರವಾದಿಗಳು ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಕಾರ್ಮಿಕ ವಿರೋಧಿ ಸಂಹಿತೆ ರದ್ದು, ಗುತ್ತಿಗೆ, ಹೊರಗುತ್ತಿಗೆ ನೇಮಕ ನಿಲ್ಲಿಸಲು ಸಮಾನ ಕೆಲಸಕ್ಕೆ ಸಮಾನ ವೇತನ, ಇಎಸ್‌ಐ, ಪಿಎಫ್ ಪಾವತಿಗಿರುವ ವೇತನ ಮಿತಿ ತೆರವು, 45 ದಿನಗಳೊಳಗೆ ಕಾರ್ಮಿಕ ಸಂಘಟನೆಗಳ ಕಡ್ಡಾಯ ನೋಂದಣಿ ಹಾಗೂ ಮಾನ್ಯತೆ, ಕೇಂದ್ರ ಕಾನೂನುಗಳನ್ನು ರಾಜ್ಯ ಸರ್ಕಾರ ತಿರಸ್ಕರಿಸಿ, ಕಾರ್ಖಾನೆ ಕಾಯ್ದೆಯ ತಿದ್ದುಪಡಿ ಹಾಗೂ ನಿಶ್ಚಿತ ಕಾಲಾವಧಿ ಕಾರ್ಮಿಕ ನೇಮಕಕ್ಕೆ ಅವಕಾಶ ನೀಡುವ ಆದೇಶಗಳ ತಿದ್ದುಪಡಿ ವಾಪಸಾತಿ, 35,000 ರೂ ಕನಿಷ್ಟ ಕೂಲಿ ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಚರ್ಚೆಸಲಾಗುವುದು ಎಂದು ಹೇಳಿದರು.

ಮಹಿಳಾ ಮುನ್ನಡೆ ಸಂಚಾಲಕಿ ಪೂರ್ಣಿಮ, ಕರ್ನಾಟಕ ಜನಶಕ್ತಿಯ ಜಿಲ್ಲಾ ಕಾರ್ಯದರ್ಶಿ ಸಿದ್ದರಾಜು, ಕೃಷ್ಣಪ್ಪ, ದೇವರಾಜ್, ಮೂರ್ತಿ, ಪುಟ್ಟಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net