

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ವಿಧಾನ ಸಭೆ ಹಾಗೂ ವಿಧಾನ ಪರಿಷತ್ಗೆ ಮುಖ್ಯ ಸಚೇತಕರನ್ನು ಆಯ್ಕೆ ಮಾಡಲಾಗಿದೆ. ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾಗಿ ಸಲೀಂ ಅಹಮದ್ ನೇಮಕಗೊಂಡಿದ್ದಾರೆ. ಹಾಗೆಯೇ ವಿಧಾನಸಭೆಯ ಮುಖ್ಯ ಸಚೇತಕರನ್ನಾಗಿ ಶಾಸಕ ಅಶೋಕ ಪಟ್ಟಣ ಅವರನ್ನು ನೇಮಕ ಮಾಡಲಾಗಿದೆ.
ದೆಹಲಿಯಲ್ಲಿ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿಯಾಗಿ ಕಾಂಗ್ರೆಸ್ ಹಿರಿಯ ನಾಯಕ ಟಿಬಿ ಜಯಚಂದ್ರ ನೇಮಕವಾಗಿದ್ದಾರೆ. ಇಂದಿನಿಂದ ಕಾಂಗ್ರೆಸ್ ಸರ್ಕಾರದ ಮೊದಲ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಜುಲೈ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.