More

  ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣ: ಬಿವೈ ವಿಜಯೇಂದ್ರ ಪ್ರತಿಕ್ರಿಯೆ

  ಚಿತ್ರದುರ್ಗ: ಸದ್ಯ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಸಿಡಿ ವಿಷಯವಾಗಿ ಎಸ್‌ಐಟಿ ತನಿಖೆ ನಡೆಯುತ್ತಿದ್ದು, ರಾಜ್ಯದ ಜನರಿಗೆ ಸತ್ಯ ಏನಿದೆ ಎಂಬುದು ಶೀಘ್ರವೇ ಗೊತ್ತಾಗಲಿದೆ. ಸಿಡಿ ರಾಮ, ಬಾಂಬೆ ರಾಮ ಎಂದು ಎಲುಬಿಲ್ಲದ ನಾಲಿಗೆ ಏನನ್ನಾದರೂ ಹೇಳುತ್ತವೆ. ರಾಜ್ಯದ ಜನ ಕಾಂಗ್ರೆಸ್ಸಿಗರಿಗೆ ತಕ್ಕ ಉತ್ತರ ಕೊಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

  ಭಾನುವಾರ ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸದೃಢವಾಗಿದೆ, ಬಿ.ಎಸ್.ಯಡಿಯೂರಪ್ಪ ಸರ್ಕಾರ ಇರುವಂಥ ಈ ಸಂದರ್ಭದಲ್ಲಿ ಕಾಂಗ್ರೆಸ್ಸಿನ ಗೂಂಡಾಗಿರಿಗೆ ಅವಕಾಶ ಕೊಡುವುದಿಲ್ಲವೆಂದು ಹೇಳಿದರು.

  ಭದ್ರಾವತಿಯಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ. ಭದ್ರಾವತಿ ಶಾಸಕರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಒಂದು ರೀತಿಯಲ್ಲಿ ತುಘಲಕ್ ದರ್ಬಾರ್ ನಡೆಸಿದ್ದು ಇದನ್ನು ಕಾಂಗ್ರೆಸ್ ನಾಯಕರು ಬೆಂಬಲಿಸುತ್ತಿದ್ದಾರೆ. ದೇಶದಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಂಡಿರುವ ಕಾಂಗ್ರೆಸ್ ಶಿವಮೊಗ್ಗದಲ್ಲಿ ಹೋರಾಟ ನಡೆಸುವ ಮೂಲಕ ತನ್ನ ಅಸ್ತಿತ್ವದ ಹುಡುಕಾಟದಲ್ಲಿ ತೊಡಗಿದೆ ಎಂದು ವ್ಯಂಗವಾಡಿದರು.

  ಲವರ್​ ಜತೆ ಮದುವೆಗೆ ಸಿದ್ಧಳಾಗಿದ್ದ ಸಿಡಿ ಲೇಡಿ: ಉತ್ತರ ಕರ್ನಾಟಕದ ಇಂಜಿನಿಯರಿಂಗ್​ ಯುವತಿಯ ಸ್ಟೋರಿ ಇದು…

  See also  ಯತ್ನಾಳ್​ಗೆ ವಿಶೇಷ ಮನವಿ ಮಾಡಿದ ವಿಜಯೇಂದ್ರ!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts