More

    ಒಕ್ಕಲಿಗರ ನಿಗಮಕ್ಕೆ 500 ಕೋಟಿ ರೂ. ಮೀಸಲಿಟ್ಟ ಸಿಎಂ: ಆದಿಚುಂಚನಗಿರಿ ಶ್ರೀಗಳ ಸಂತಸ

    ಬೆಂಗಳೂರು: ಇಂದು ಮಂಡನೆಯಾದ ರಾಜ್ಯ ಬಜೆಟ್​ನಲ್ಲಿ ಒಕ್ಕಲಿಗರ ನಿಗಮಕ್ಕೆ 500 ಕೋಟಿ ರೂಪಾಯಿ ಘೋಷಿಸಿರುವ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ ರೂ. ಅನುದಾನ ನೀಡಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಮುದಾಯದ ಅಭಿವೃದ್ಧಿಯ ದೃಷ್ಟಿಯಿಂದ ತ್ವರಿತವಾಗಿ ಒಕ್ಕಲಿಗರ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಬೇಕು ಎಂದು ಸಮುದಾಯ ಮತ್ತು ಸಮುದಾಯದ ಹಲವು ಸಂಘ ಸಂಸ್ಥೆಗಳ ಪರವಾಗಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠವು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಶ್ರೀಮಠದ ಮನವಿಗೆ ಸ್ಪಂದಿಸಿರುವ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಸಾಲಿನ ಬಜೆಟ್​ನಲ್ಲಿ ಒಕ್ಕಲಿಗ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸುವ ತೀರ್ಮಾನ ಕೈಗೊಂಡು 500 ಕೋಟಿ ರೂ. ಅನುದಾನ ಘೋಷಿಸಿರುವುದು ಸಂತಸದ ಸಂಗತಿ ಎಂದು ತಿಳಿಸಿದ್ದಾರೆ.

    ಒಕ್ಕಲಿಗರ ನಿಗಮಕ್ಕೆ 500 ಕೋಟಿ ರೂ. ಮೀಸಲಿಟ್ಟ ಸಿಎಂ: ಆದಿಚುಂಚನಗಿರಿ ಶ್ರೀಗಳ ಸಂತಸಅನ್ನದಾತರೆನಿಸಿರುವ ಒಕ್ಕಲಿಗ ಸಮುದಾಯ ರಾಜ್ಯದ ಜನಸಂಖ್ಯೆಯಲ್ಲಿ ಶೇ.17ರಷ್ಟಿದ್ದು ರಾಜ್ಯದ ಬೊಕ್ಕಸಕ್ಕೆ ಶೇ.65 ಆದಾಯವನ್ನು ಸಲ್ಲಿಸುವ ಮೂಲಕ ನಾಡಿನ ಅಭಿವೃದ್ಧಿಗೆ ಶ್ರಮಿಸುತ್ತಿದೆ. ದೇಶದ ಬೆನ್ನೆಲುಬಾದ ಕೃಷಿಕ ಸಮುದಾಯದ ನೆರವಿಗೆ ನಿಂತ ಸರ್ಕಾರದ ಈ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಅಭಿನಂದಿಸುತ್ತೇವೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದ್ದಾರೆ.

    ಬಜೆಟ್​ನಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಸಿಕ್ಕ ಅನುದಾನ ಹೀಗಿದೆ

    ಸಿನಿಮಾ ಕ್ಷೇತ್ರಕ್ಕೂ ವಿಆರ್​ಎಲ್​ ಸಂಸ್ಥೆ ಎಂಟ್ರಿ!

    ಅಕ್ಕನ ಕಣ್ಣೆದುರಲ್ಲೇ ಭಾವನ ಕಿವಿ ಕಚ್ಚಿ ತುಂಡರಿಸಿದ ಬಾಮೈದುನ!

    ಮಹಿಳೆಯರಿಗೆ ರಾಜ್ಯ ಬಜೆಟ್​ನಲ್ಲಿ ಸಿಕ್ಕಿದ್ದೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts