18.5 C
Bangalore
Monday, December 16, 2019

ಕೆಪಿಸಿಸಿಗೆ ಭರ್ಜರಿ ಸರ್ಜರಿ: ಲೋಕಸಭೆಯಲ್ಲಿ ಸೋತಿದ್ದಕ್ಕೆ ಇಡೀ ತಂಡಕ್ಕೆ ಗೇಟ್​ಪಾಸ್

Latest News

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋಲುಂಡು ಹೀನಾಯ ಸ್ಥಿತಿಗೆ ತಲುಪಿರುವ ಕಾಂಗ್ರೆಸ್ ಇದೀಗ ಪಕ್ಷದಲ್ಲಿ ಆಮೂಲಾಗ್ರ ಬದಲಾವಣೆ ತರಲು ಮುಂದಾಗಿದ್ದು, ಕೆಪಿಸಿಸಿ ವಿಸರ್ಜಿಸಿ ಆದೇಶ ಹೊರಡಿಸಿದೆ.

ದೇಶಾದ್ಯಂತ ಸರ್ಜರಿಗೆ ಮುಂದಾಗಿರುವ ಎಐಸಿಸಿ, ಮೊದಲಿಗೆ ಕರ್ನಾಟಕದಿಂದಲೇ ಕಾರ್ಯಾಚರಣೆ ಆರಂಭಿಸಿದ್ದು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಕಾರ್ಯಾಧ್ಯಕ್ಷರನ್ನು ಹೊರತುಪಡಿಸಿ ಉಳಿದೆಲ್ಲ ಪದಾಧಿಕಾರಿಗಳನ್ನು ಪಕ್ಷದ ಜವಾಬ್ದಾರಿಯಿಂದ ಕೈಬಿಡಲಾಗಿದೆ. ಜತೆಗೆ ತಕ್ಷಣವೇ ಅರ್ಹರನ್ನು ಗುರುತಿಸಿ ಪಕ್ಷದ ಜವಾಬ್ದಾರಿ ನೀಡುವಂತೆ ರಾಜ್ಯದ ಪ್ರಮುಖ ನಾಯಕರಿಗೆ ಸೂಚನೆ ನೀಡಿದೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದೆ. ನಮ್ಮ ಮೇಲೆ ಜವಾಬ್ದಾರಿ ಬಹಳಷ್ಟಿದೆ. ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಪಕ್ಷವನ್ನು ಪುನರ್ ಸಂಘಟಿಸುವ ಕೆಲಸ ಮಾಡುತ್ತೇವೆ’ ಎಂದು ಹೇಳಿದ್ದಾರೆ. ಪಕ್ಷದ ಮಾಹಿತಿ ಪ್ರಕಾರ ನಾಮನಿರ್ದೇಶನ ಹೊಂದಿದ 360 ಪದಾಧಿಕಾರಿಗಳನ್ನು ಜವಾಬ್ದಾರಿಯಿಂದ ಬಿಡುಗಡೆ ಮಾಡಲಾಗಿದೆ. ಇವರಲ್ಲಿ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷರು ಸೇರಿದ್ದಾರೆ.

ಹೊಸ ಸಮಿತಿ: ಮುಂದಿನ ಒಂದು ತಿಂಗಳಲ್ಲಿ ಅತಿ ಕಡಿಮೆ ಸಂಖ್ಯೆಯಲ್ಲಿ ಪದಾಧಿಕಾರಿಗಳ ತಂಡ ಕಟ್ಟಲು ಪಕ್ಷ ಸೂಚನೆ ನೀಡಿದೆ. ಪಕ್ಷಕ್ಕಾಗಿ ಕೆಲಸ ಮಾಡುವ ಉತ್ಸಾಹ ಇರುವ ಹೊಸಬರಿಗೆ ಹೆಚ್ಚಿನ ಅವಕಾಶ ನೀಡಿ, ಹಿರಿಯರನ್ನೂ ಒಳಗೊಂಡಂತೆ, ಜಾತಿ, ಧರ್ಮ, ಜಿಲ್ಲೆ, ಪ್ರದೇಶವಾರು ಆಧಾರದಲ್ಲಿ ತಂಡ ಕಟ್ಟುವ ಆಲೋಚನೆ ಪಕ್ಷದ್ದು. ರಾಜ್ಯದ ಪ್ರಮುಖ ನಾಯಕರ ಅಭಿಪ್ರಾಯ ಪಡೆದು ಅತಿ ಕಡಿಮೆ ಸಂಖ್ಯೆಯಲ್ಲಿ ಅಂದರೆ 30-40 ಪದಾಧಿಕಾರಿಗಳಿರುವ ಪ್ರಭಾವಯುತ ತಂಡ ರಚನೆಗೆ ದಿನೇಶ್ ಗುಂಡೂರಾವ್ ನಿರ್ಧರಿಸಿದ್ದು, ಇನ್ನೊಂಡು ತಿಂಗಳಲ್ಲಿ ಹೊಸ ತಂಡದ ಘೋಷಣೆಯಾಗುವ ಸಾಧ್ಯತೆ ಇದೆ.

ತಲೆದಂಡ ಏಕೆ?: 360 ಮಂದಿ ಪದಾಧಿಕಾರಿಗಳಿದ್ದರೂ ಲೋಕಸಭೆ ಚುನಾವಣೆಯಲ್ಲಿ ಬಹುಪಾಲು ಮಂದಿ ತೊಡಗಿಕೊಳ್ಳಲಿಲ್ಲ. ಪಕ್ಷದ ಬೇರು ಮಟ್ಟದಲ್ಲಿ ಕೆಲಸ ಮಾಡಲಿಲ್ಲ. ಪಕ್ಷ ನೀಡಿದ ಜವಾಬ್ದಾರಿ ನಿರ್ವಹಿಸಲಿಲ್ಲ. ಕೇವಲ ಪ್ರಮುಖ ನಾಯಕರ ಹಿಂದೆ ಅಲೆದಾಟ ಮಾಡಿದ್ದು ಬಿಟ್ಟರೆ ಅವರಿಂದ ಪಕ್ಷಕ್ಕೆ ಉಪಯೋಗವಾಗಿರಲಿಲ್ಲ. ಈ ಕಾರಣಕ್ಕೆ ಪುನರ್ ರಚನೆಯೇ ಸೂಕ್ತ ಎಂದು ಕೆಪಿಸಿಸಿ ಎಐಸಿಸಿಗೆ ವರದಿಯೊಂದನ್ನು ನೀಡಿತ್ತು.

ಪ್ರಮುಖರಿಗೆ ಕೊಕ್

ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್. ಶಂಕರ್, ವಿ.ಆರ್ ಸುದರ್ಶನ್, ಮೋಟಮ್ಮ, ವೀರಣ್ಣ ಮತ್ತಿಕಟ್ಟಿ, ರಾಣಿ ಸತೀಶ್, ಪ್ರೊ.ಕೆ.ಇ.ರಾಧಾಕೃಷ್ಣ ಸೇರಿ ಹಲವು ಪ್ರಮುಖರು ಪದಾಧಿಕಾರಿ ವರ್ಗದಿಂದ ಹೊರಬಿದ್ದಿದ್ದಾರೆ.

ರಾಜಕೀಯ ನಡೆ

ಕೆಪಿಸಿಸಿ ಘಟಕದ ಪುನಾರಚನೆ ಹಿಂದೆ ಸಿದ್ದರಾಮಯ್ಯ ಪ್ರಭಾವ ಕೆಲಸ ಮಾಡಿದೆ ಎಂಬ ಮಾತು ಪಕ್ಷದಲ್ಲಿದೆ. ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಪಕ್ಷದ ಮೇಲೆ ಹಿಡಿತ ಸಾಧಿಸಲು ಸಿದ್ದರಾಮಯ್ಯ ಪುನಾರಚನೆಗೆ ಪ್ರಯತ್ನಿಸಿದ್ದಾರೆಂಬ ಮಾತೂ ಕೇಳಿಬಂದಿದೆ. ಪಕ್ಷದ ಹಿರಿಯ ನಾಯಕರ ಅಭಿಪ್ರಾಯ ಪಡೆಯದೇ ಈ ನಿರ್ಧಾರ ಮಾಡಲಾಗಿದ್ದು, ಇದು ಅಸಮಾಧಾನಕ್ಕೂ ಕಾರಣವಾಗಿದೆ ಎಂಬ ಮಾತುಗಳು ಹರಿದಾಡಿದಾಡಿದೆ.

ವಿಸಿಟಿಂಗ್ ಕಾರ್ಡ್ ಪದಾಧಿಕಾರಿಗಳು!

ಹೇಳಿಕೊಳ್ಳುವುದಕ್ಕೆ ಕೆಪಿಸಿಸಿಗೆ ಅತಿದೊಡ್ಡ ಪದಾಧಿಕಾರಿ ವರ್ಗವಿತ್ತು. ಇದರಲ್ಲಿದ್ದ ಬಹುಪಾಲು ಮಂದಿ ವಿಸಿಟಿಂಗ್ ಕಾರ್ಡ್​ಗಾಗಿ ಪದಾಧಿಕಾರಿ ಅವಕಾಶ ಗಿಟ್ಟಿಸಿಕೊಂಡವರು. ಇದನ್ನು ಪಕ್ಷದ ಪ್ರಮುಖ ನಾಯಕರೇ ಒಪ್ಪಿಕೊಳ್ಳುತ್ತಾರೆ. ಇವರಲ್ಲಿ ಶೇ.99 ಮಂದಿ ಪಕ್ಷ ಸಂಘಟನೆಗಾಗಿ ಕೆಲಸ ಮಾಡಿದವರಲ್ಲ, ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಿಲ್ಲ. ಒಂದು ಲೆಕ್ಕಾಚಾರದ ಪ್ರಕಾರ ಕಾರ್ಯದರ್ಶಿ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸೇರಿ 360 ಮಂದಿ ಪದಾಧಿಕಾರಿಗಳಿದ್ದರು. ಅಚ್ಚರಿ ಎಂದರೆ ಕೆಲವರು 8-9 ವರ್ಷಗಳಿಂದಲೂ ಅದೇ ಹುದ್ದೆಯಲ್ಲಿ ಮುಂದುವರಿದುಕೊಂಡೇ ಬಂದಿದ್ದಾರೆ. ವರ್ಷದಿಂದ ವರ್ಷಕ್ಕೆ ಪದಾಧಿಕಾರಿ ಸಂಖ್ಯೆ ಹೆಚ್ಚಾಗುತ್ತಲೇ ಇತ್ತು. ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳು, ಪ್ರಭಾವಿ ನಾಯಕರು ಪಕ್ಷದ ತಮ್ಮ ಅನುಯಾಯಿಗಳಿಗೆ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಬಳುವಳಿಯಾಗಿ ಕೊಡಿಸುತ್ತಿದ್ದರು. ಇವರೆಲ್ಲ ವಿಸಿಟಿಂಗ್ ಕಾರ್ಡ್​ನಲ್ಲಿ ತಮಗೆ ಸಿಕ್ಕ ಜವಾಬ್ದಾರಿ ನಮೂದಿಸಿಕೊಂಡು ಬಾಲಂಗೋಚಿಗಳಂತೆ ಅಲೆದಿದ್ದೇ ಹೆಚ್ಚು. ಇವರನ್ನು ಕದಲಿಸುವುದು ಪಕ್ಷದ ರಾಜ್ಯಾಧ್ಯಕ್ಷರಿಗೂ ಅಷ್ಟು ಸುಲಭವಾಗಿರಲಿಲ್ಲ. ಇದೀಗ ಅವರಿಗೆಲ್ಲ ಗೇಟ್ ಪಾಸ್ ನೀಡಲಾಗಿದೆ.

ನವೆಂಬರ್ ಚುನಾವಣೆಗೆ ಕೈ ತಯಾರಿ

ಬೆಂಗಳೂರು: ಮುಂದಿನ ನವೆಂಬರ್​ನಲ್ಲಿ ನಡೆಯುವ ವಿವಿಧ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷ ಅಧಿಕಾರ ಹಿಡಿಯಲು ಕಾಂಗ್ರೆಸ್ ತಯಾರಿ ಆರಂಭಿಸಿದೆ. ಬುಧವಾರ ಪಕ್ಷದ ಕಚೇರಿಯಲ್ಲಿ ನಾಲ್ಕು ಜಿಲ್ಲಾ ಘಟಕಗಳ ಪ್ರಮುಖರೊಂದಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಭೆ ನಡೆಸಿ, ಮಾರ್ಗದರ್ಶನ ಮಾಡಿದರು. ಸ್ಥಳೀಯ ಸಂಸ್ಥೆಯಲ್ಲಿ ಅಧಿಕಾರ ಹಿಡಿಯುವ ಮೂಲಕ ಪಕ್ಷವನ್ನು ಬಲಗೊಳಿಸಬೇಕು. ಈಗಿನಿಂದಲೇ ಚುನಾವಣೆಗೆ ತಯಾರಿ ಮಾಡಿಕೊಳ್ಳುವುದು ಮತ್ತು ಗೊಂದಲ ಮಾಡಿಕೊಳ್ಳದೇ ಅಭ್ಯರ್ಥಿಗಳನ್ನು ಮುಂಚಿತವಾಗಿ ಆಯ್ಕೆ ಮಾಡುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

ಖರ್ಗೆ ಮನೆಗೆ ಕುಮಾರಸ್ವಾಮಿ ಭೇಟಿ

ಬೆಂಗಳೂರು: ಸಿಎಂ ಎಚ್.ಡಿ. ಕುಮಾರಸ್ವಾಮಿ ಬುಧವಾರ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮನೆಗೆ ಭೇಟಿ ನೀಡಿ, ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಿದರು. ಸರ್ಕಾರದ ಆಗುಹೋಗುಗಳು, ಗ್ರಾಮ ವಾಸ್ತವ್ಯ, ಮೈತ್ರಿಯಲ್ಲಿನ ವ್ಯತ್ಯಾಸ ಮತ್ತಿತರ ವಿಚಾರಗಳು ಚರ್ಚೆಗೆ ಬಂದಿದೆ ಎನ್ನಲಾಗಿದ್ದು, ಪ್ರಮುಖವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ನೇಮಕದ ಬಗ್ಗೆ ಖರ್ಗೆ ಪ್ರಶ್ನಿಸಿದ್ದಾರೆಂದು ಮೂಲಗಳು ತಿಳಿಸಿವೆ. ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿದ ಖರ್ಗೆ, ಕುಮಾರಸ್ವಾಮಿ ಸರ್ಕಾರ ನಡೆಸುವ ಕುರಿತಂತೆ ನಾನೇನೂ ಮಾತನಾಡಿಲ್ಲ. ನಾನೇ ಚುನಾವಣೆಯಲ್ಲಿ ಸೋತಿದ್ದು, ಹೆಚ್ಚಿಗೆ ಸಲಹೆ ಕೊಡೋಕೆ ಹೋದರೆ ಅದು ಸಮಂಜಸ ಆಗೋದಿಲ್ಲ ಎಂದು ಹೇಳಿದರು. ಸಮ್ಮಿಶ್ರ ಸರ್ಕಾರದಲ್ಲಿ ಹಲವು ವ್ಯತ್ಯಾಸಗಳಿವೆ. ಏಕೆಂದರೆ ಅನೇಕ ಕಾರ್ಯಕರ್ತರು ಬಂದು ನಮ್ಮ ಬಳಿ ಕಷ್ಟ ಹೇಳಿಕೊಳ್ಳುತ್ತಾರೆ. ನನ್ನ ಜಿಲ್ಲೆಯಲ್ಲಿ ಎಲ್ಲರೂ ಒಂದಾಗಿ ಹೋಗಬೇಕು. ಈ ನಿಟ್ಟಿನಲ್ಲಿ ಕೆಲಸ ಆಗುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಕೊಡಿ ಎಂದು ಮುಖ್ಯಮಂತ್ರಿಯವರಿಗೆ ತಿಳಿಸಿದ್ದೇನೆ ಎಂದರು.

ಪಕ್ಷದ ವಿಚಾರದಲ್ಲಿ ನಡೆದಿರುವ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಹಿತದೃಷ್ಟಿಯಿಂದ ನಾವೆಲ್ಲರೂ ಒಂದಾಗಿ ಕೆಲಸ ಮಾಡಬೇಕು. ಅಲ್ಲದೆ ಈ ಸಮಸ್ಯೆ ಉಂಟಾದಾಗ ಪಕ್ಷದ ನಾಯಕರು ಸಮಸ್ಯೆ ಬಗೆಹರಿಸುವ ಕೆಲಸ ಆಗಬೇಕು ಎಂದು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...