More

    ಮುಂದಿನ ನಾಲ್ಕು ದಿನ ಭಾರಿ ಮಳೆ; ನಾಳೆ 13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

    ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರಿಯಲಿದೆ. ಶನಿವಾರ ರಾಜಧಾನಿ ಬೆಂಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಯಾದಗಿರಿ ಮತ್ತು ಉಡುಪಿಯಲ್ಲಿ ವ್ಯಾಪಕವಾಗಿ ಮಳೆ ಸುರಿದಿದೆ.

    ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಜೂನ್ 19 ರಿಂದ 22 ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

    ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಬೆಂ.ಗ್ರಾಮಾಂತರ ಮತ್ತು ಚಿತ್ರದುರ್ಗದಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಒಳನಾಡಿನ ಬಹುತೇಕ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಹಗುರದಿಂದ ಕೂಡಿದ ಮಳೆ ಬೀಳಲಿದೆ.

    ಜೂನ್ 1 ರಿಂದ 18 ರವರೆಗೆ ರಾಜ್ಯದಲ್ಲಿ ವಾಡಿಕೆಯಂತೆ 109 ಮಿಮೀ ಮಳೆ ಬದಲಾಗಿ 78 ಮಿಮೀ ಮಳೆಯಾಗಿದ್ದು, ಶೇ.28 ಮಳೆ ಕುಂಠಿತವಾಗಿದೆ. ಕರಾವಳಿಯಲ್ಲಿ ಶೇ. 64, ಮಲೆನಾಡು ಶೇ 61, ಉತ್ತರ ಒಳನಾಡು ಶೇ.13 ಮಳೆ ಕೊರತೆಯಾದರೆ, ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ. 100 ಹೆಚ್ಚು ಮಳೆ ಬಿದ್ದಿದೆ.

    ಮಾಂಸದ ಅಂಗಡಿ, ಕೋಳಿ ಅಂಗಡಿ ತೆರವುಗೊಳಿಸಿ ಅಶೋಕ್ ಜೀ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts