ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೊನಾ ಹಾವಳಿ ಹೆಚ್ಚಾಗುತ್ತಿದ್ದು, ಇಂದು 47,754 ಜನರಿಗೆ ಸೋಂಕು ತಗುಲಿದೆ. ಒಟ್ಟು 29 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದಾರೆ. ನಿನ್ನೆಗೆ ಹೋಲಿಕೆ ಮಾಡಿದಾಗ ರಾಜ್ಯದಲ್ಲಿ ಇಂದು ಹೆಚ್ಚಿನ ಪ್ರಕರಣಗಳು ದಾಖಲಾಗಿವೆ.
ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡಿದ್ದಾರೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 47,754 ಸಕ್ರಿಯ ಪ್ರಕರಣ ದಾಖಲಾಗಿದ್ದು, ಬೆಂಗಳೂರಿನಲ್ಲೇ ಅತ್ಯಧಿಕ 30,540 ಜನರಲ್ಲಿ ಮಹಾಮಾರಿ ಪತ್ತೆಯಾಗಿದೆ.
ರಾಜ್ಯದಲ್ಲಿ ಸದ್ಯ ಪಾಸಿಟಿವಿಟಿ ರೇಟ್ ಶೇ. 18.48ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ 22,143 ಜನರು ಕೋವಿಡ್ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಕರೊನಾ ಸೋಂಕಿನಿಂದ 29 ಜನರು ಸಾವನ್ನಪ್ಪಿದ್ದು, ಬೆಂಗಳೂರಿನಲ್ಲೇ 8 ಜನರು ಮೃತರಾಗಿದ್ದಾರೆ.
ಲಾಹೋರ್ನ ಅನಾರ್ಕಲಿ ಮಾರುಕಟ್ಟೆಯಲ್ಲಿ ಪ್ರಬಲ ಬಾಂಬ್ ಸ್ಫೋಟ; ಮೂವರು ಸಾವು!