ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 415 ಕರೊನಾ ಪಾಸಿಟಿವ್ ಕೇಸ್ ದಾಖಲಾಗಿದೆ. ಈ ಪೈಕಿ ಬೆಂಗಳೂರು ನಗರ ಒಂದರಲ್ಲೇ 400 ಪಾಸಿಟಿವ್ ಕೇಸ್ ವರದಿಯಾಗಿದೆ.
ಈ ಮೂಲಕ ಬೆಂಗಳೂರು ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 3,542ಕ್ಕೆ ಏರಿಕೆ ಕಂಡಿದೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,688ಕ್ಕೆ ತಲುಪಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 2.56ಕ್ಕೆ ತಲುಪಿದೆ.
ಬೆಂಗಳೂರು ಹೊರತು ಪಡಿಸಿ ಉಳಿದಂತೆ 7 ಜಿಲ್ಲೆಗಳಲ್ಲಿ 15 ಕೇಸ್ ಮತ್ತು 22 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು 378 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಈವರೆಗೆ ಒಟ್ಟು 40,066 ಮರಣ ಪ್ರಕರಣ ಪತ್ತೆಯಾಗಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,56,749 ಮಂದಿಗೆ ಕರೊನಾ ಬಂದಿದೆ. ಒಟ್ಟು 39,12,953 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 52,267 ಮಂದಿಗೆ ಕರೊನಾ ಲಸಿಕೆ ನೀಡಲಾಗಿದೆ.
ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲು