More

  ಮರಾಠ ಮೀಸಲಾತಿ ಕಿಚ್ಚು| KKRTC ಬಸ್​ಗೆ ಬೆಂಕಿ; ಅಂತರ್​ರಾಜ್ಯ ಸಾರಿಗೆ ಸಂಚಾರ ಸ್ಥಗಿತ

  ಬೆಂಗಳೂರು: ಮರಾಠ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದಿದ್ದು, ಕರ್ನಾಟಕ ಸರ್ಕಾರಕ್ಕೆ ಸೇರಿದ KKRTC ಬಸ್​ಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.

  ಬೀದರ್​ ಜಿಲ್ಲೆ ಭಾಲ್ಕಿ ತಾಲ್ಲೂಕಿನಿಂದ ಪುಣೆಯತ್ತ ಹೊರಟಿದ್ದ KKRTC ಬಸ್ KA-38-F-1201 ಅನ್ನು ಮಹಾರಾಷ್ಟ್ರದ ಉಮರ್ಗಾ ಬಳಿ ಬೆಂಕಿ ಹಚ್ಚಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅಂತರ್​ರಾಜ್ಯ ಬಸ್​ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ KKRTC ನಿಗಮದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  KKRTC Bus

  ಇದನ್ನೂ ಓದಿ: ಮರಾಠ ಮೀಸಲಾತಿ ಕಿಚ್ಚು; ಶಾಸಕ-ಸಚಿವನ ಮನೆ, ಹೋಟೆಲ್​ಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

  ಈ ಕುರಿತು ಪ್ರತಿಕ್ರಿಯಿಸಿರುವ KKRTC ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ, ಕರ್ನಾಟಕ ಸರ್ಕಾರಕ್ಕೆ ಸೇರಿದ ಬಸ್​ಗೆ ಬೆಂಕಿ ಹಚ್ಚಿದ ಪರಿಣಾಮ ಅಂತರ್​ರಾಜ್ಯ ಸಾರಿಗೆ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಹಾರಾಷ್ಟ್ರದ ಉಮರ್ಗಾ ಬಳಿ ಪ್ರತಿಭಟನಕಾರರು ಬಸ್​ಗೆ ಅಡ್ಡಹಾಕಿ ಪ್ರಯಾಣಿಕರನ್ನು ಕೆಳಗಿಳಿಸಿ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.

  ಸ್ಥಳೀಯ ಪೊಲೀಸರ ನೆರವಿನಿಂದ 39 ಪ್ರಯಾಣಿಕರಿಗೆ ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮಾಹಾರಾಷ್ಟ್ರದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ರಾಜ್ಯ ಸಾರಿಗೆ ನಿಗಮಕ್ಕೆ ಸೇರಿದ ಬಸ್​ಗಳನ್ನು ಹತ್ತಿರದ ಪೊಲೀಸ್​ ಠಾಣೆ ಹಾಗೂ ಡಿಪೋಗಳಲ್ಲಿ ನಿಲ್ಲಿಸುವಂತೆ ಸೂಚಿಸಲಾಗಿದೆ. ಈ ಹಿನ್ನಲೆಯಲ್ಲಿ ತುಳಜಾಪುರ ಯಾತ್ರೆ ಸೇರಿದಂತೆ ಮಾಹಾರಾಷ್ಟ್ರಕ್ಕೆ ಅಂತರ್​ರಾಜ್ಯ ಬಸ್​ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು KKRTC ವ್ಯವಸ್ಥಾಪಕ ನಿರ್ದೇಶಕರಾದ ಎಂ. ರಾಚಪ್ಪ ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts