26.8 C
Bangalore
Friday, December 13, 2019

ಮುಂಬೈ-ಕರ್ನಾಟಕ ಪಂದ್ಯ ಡ್ರಾ

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

| ಇಮಾಮಹುಸೇನ್ ಗೂಡುನವರ

ಬೆಳಗಾವಿ: ಪಂದ್ಯದ ನಾಲ್ಕೂ ದಿನವೂ ಬಲಿಷ್ಠ ಮುಂಬೈ ತಂಡದ ವಿರುದ್ಧ ಮೇಲುಗೈ ಸಾಧಿಸಿದ ಕರ್ನಾಟಕ ತಂಡ ಸತತ 2ನೇ ರಣಜಿ ಪಂದ್ಯವನ್ನು ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ ಡ್ರಾ ಮಾಡಿ ಕೊಂಡಿತು. ಇದರಿಂದ ಕರ್ನಾಟಕ ಮೂರು ಅಂಕ ಸಂಪಾದಿಸಿದರೆ, 41 ಬಾರಿಯ ಚಾಂಪಿಯನ್ ಮುಂಬೈ 1 ಅಂಕ ಸಂಪಾದಿಸಿತು.

ಆಟೋನಗರದ ಕೆಎಸ್​ಸಿಎ ಮೈದಾನದಲ್ಲಿ ಶುಕ್ರವಾರ ನಡೆದ ಅಂತಿಮ ದಿನದಾಟದಲ್ಲಿ 3 ವಿಕೆಟ್​ಗೆ 81 ರನ್​ಗಳಿಂದ 2ನೇ ಇನಿಂಗ್ಸ್ ಮುಂದುವರಿಸಿದ ಕರ್ನಾಟಕ 51 ಓವರ್​ಗಳಲ್ಲಿ 5 ವಿಕೆಟ್​ಗೆ 170 ರನ್ ಬಾರಿಸಿ ಡಿಕ್ಲೇರ್ ಮಾಡಿಕೊಂಡಿತು. ಇದರಿಂದ ಗೆಲುವಿಗೆ 366 ರನ್​ಗಳ ಸವಾಲು ಪಡೆದ ಮುಂಬೈ 64 ಓವರ್​ಗಳಲ್ಲಿ 4 ವಿಕೆಟ್​ಗೆ 173 ರನ್ ಬಾರಿಸಿದ್ದಾಗ ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ನಿರ್ಧಾರ ಮಾಡಲಾಯಿತು. 2ನೇ ಇನಿಂಗ್ಸ್​ನಲ್ಲೂ ಗಮನಸೆಳೆಯುವ ನಿರ್ವಹಣೆ ನೀಡಿದ ಕೆವಿ ಸಿದ್ಧಾರ್ಥ್ (71 ರನ್, 125 ಎಸೆತ, 6 ಬೌಂಡರಿ, 1 ಸಿಕ್ಸರ್) ಹಾಗೂ ಆಲ್ರೌಂಡರ್ ಸ್ಟುವರ್ಟ್ ಬಿನ್ನಿ (30 ರನ್, 70 ನಿಮಿಷ, 46 ಎಸೆತ) ತಂಡದ ಉತ್ತಮ ಮೊತ್ತಕ್ಕೆ ಕಾರಣರಾದರು. ಮೊದಲ ಇನಿಂಗ್ಸ್​ನಲ್ಲಿ ಶತಕ ಬಾರಿಸಿದ್ದ ಸಿದ್ಧಾರ್ಥ್ ಎದುರಿಸಿದ 105ನೇ ಎಸೆತದಲ್ಲಿ ಅರ್ಧಶತಕ ಪೂರೈಸಿದರು. 4ನೇ ದಿನದಾಟ ಆರಂಭಿಸಿದ ಸಿದ್ದಾರ್ಥ-ಬಿನ್ನಿ ಜೋಡಿ 89 ಎಸೆತಗಳನ್ನು ಎದುರಿಸಿ 6 ಬೌಂಡರಿಗಳ ನೆರವಿನಿಂದ 61 ರನ್​ಗಳ ಜತೆಯಾಟವಾಡಿತು. ಕರ್ಷ್ ಕೊಠಾರಿ ಎಸೆತದಲ್ಲಿ ಬಿನ್ನಿ ಔಟಾದಾಗ ಕರ್ನಾಟಕ 135 ರನ್ ಬಾರಿಸಿತ್ತು. ನಂತರದ ಬಂದ ಬಿಆರ್ ಶರತ್ (5 ರನ್, 10 ಎಸೆತ) ಸತತ ಮೂರನೇ ಇನಿಂಗ್ಸ್​ನಲ್ಲಿ ಕೆಟ್ಟ ನಿರ್ವಹಣೆ ತೋರಿ ಔಟಾದರು. 151 ರನ್​ಗೆ 5 ವಿಕೆಟ್ ಕಳೆದುಕೊಂಡಿದ್ದ ಕರ್ನಾಟಕ ಕೊನೆಗೆ 170 ರನ್ ಬಾರಿಸಿ ಭೋಜನ ವಿರಾಮಕ್ಕೂ ಮುನ್ನವೇ ಇನಿಂಗ್ಸ್ ಡಿಕ್ಲೇರ್ ಪ್ರಕಟಿಸಿತು.

ಮುಗ್ಗರಿಸಿದ ಮುಂಬೈ

ಗುರಿ ಬೆನ್ನಟ್ಟಿದ ಮುಂಬೈ ಆರಂಭದಲ್ಲೇ ಮುಗ್ಗರಿಸಿತು. ಮೊದಲ ಇನಿಂಗ್ಸ್​ನಲ್ಲಿ ಅರ್ಧಶತಕ ಸಿಡಿಸಿದ್ದ ಜಯ್ ಬಿಷ್ಟಾ ಕೇವಲ ಎರಡೇ ರನ್ ಗಳಿಸಿ, ಮಿಥುನ್​ಗೆ ವಿಕೆಟ್ ಒಪ್ಪಿಸಿದರು. ಕರ್ನಾಟಕ ಬೌಲಿಂಗ್ ಬಿಗಿ ಮಾಡುವ ಹೊತ್ತಿನಲ್ಲಿ, ಅರ್ಧಶತಕ ಬಾರಿಸಿದ ಅಖಿಲ ಹೇರ್ವಾಡ್ಕರ್ (53 ರನ್, 74 ಎಸೆತ, 9 ಬೌಂಡರಿ) ಹಾಗೂ ಅಶಯ್ ಸರ್ದೇಸಾಯಿ (27 ರನ್, 136 ನಿಮಿಷ, 80 ಎಸೆತ) ಗಟ್ಟಿಯಾಗಿ ಕ್ರೀಸ್​ನಲ್ಲಿ ನಿಂತು 2ನೇ ವಿಕೆಟ್​ಗೆ 71 ರನ್ ಜತೆಯಾಟವಾಡಿ ತಂಡವನ್ನು ಅಪಾಯದಿಂದ ಪಾರು ಮಾಡಿದರು. 25ನೇ ಓವರ್​ನಲ್ಲಿ ಅಶಯ್ ಶ್ರೇಯಸ್ ಗೋಪಾಲ್​ಗೆ ವಿಕೆಟ್ ಒಪ್ಪಿಸಿದರೆ, ಅರ್ಧಶತಕ ಬಾರಿಸಿದ ಮತ್ತೊಬ್ಬ ಆಟಗಾರ ಸೂರ್ಯಕುಮಾರ್ ಯಾದವ್ (53ರನ್, 118 ಎಸೆತ, 8 ಬೌಂಡರಿ) ಹಾಗೂ ಸಿದ್ಧೇಶ್ ಲಾಡ್ (4) 4ನೇ ವಿಕೆಟ್​ಗೆ 49 ರನ್​ಗಳ ಜತೆಯಾಟವಾಡಿ ಪಂದ್ಯವನ್ನು ಡ್ರಾದತ್ತ ಕೊಂಡೊಯ್ದರು. ಲಾಡ್ ಸುಚಿತ್​ಗೆ ವಿಕೆಟ್ ಒಪ್ಪಿಸಿದರೆ, ಸೂರ್ಯಕುಮಾರ್ ಹಾಗೂ ಆದಿತ್ಯ ತಾರೆ (29 ರನ್, 66 ನಿಮಿಷ, 65 ಎಸೆತ) ಅಜೇಯರಾಗಿ ಉಳಿದರು. ಪಂದ್ಯದಲ್ಲಿ 232 ರನ್ ಬಾರಿಸಿದ ಸಿದ್ಧಾರ್ಥ್ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರವಾದರು.

ರೋನಿತ್ ಒಳಗೊಂಡ ಬೌಲಿಂಗ್ ವಿಭಾಗ ಉತ್ತಮ ಪ್ರದರ್ಶನ ತೋರಿದ್ದರಿಂದ ಮುಂಬೈಯನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕಲು ಸಾಧ್ಯವಾಯಿತು. ಇದು ಯುವ ತಂಡ. ಬೌಲಿಂಗ್ ವಿಭಾಗದ ಸಾಧನೆಯಿಂದ 3 ಅಂಕ ದಕ್ಕಿತು.

| ಕೆ.ವಿ.ಸಿದ್ಧಾರ್ಥ್

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....