More

    36,261 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

    ಬೆಂಗಳೂರು: 36,261 ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಸದ್ಯಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅದಾದ ನಂತರ ನೇಮಕಾತಿಗೆ ಅಂತಿಮ ಅಧಿಸೂಚನೆ ಪ್ರಕಟವಾಗುತ್ತದೆ.

    ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ನಿಯಮಗಳು 1978, ಕರ್ನಾಟಕ ರಾಜ್ಯ ಪೊಲೀಸ್ ಮಿನಿಸ್ಟೀರಿಯಲ್ ಸರ್ವೀಸಸ್ ನೇಮಕಾತಿ ತಿದ್ದುಪಡಿ ನಿಯಮಗಳು 2020ರ ಅಡಿಯಲ್ಲಿ ಈ ಪೊಲೀಸ್ ಕಾನ್ಸ್‌ಟೇಬಲ್ಗಳ ನೇಮಕಾತಿ ನಡೆಯುತ್ತಿದ್ದು, ಒಟ್ಟು 36,361 ಹುದ್ದೆಗಳ ಭರ್ತಿಗೆ ಕರಡು ಅಧಿಸೂಚನೆ ಪ್ರಕಟವಾಗಿದೆ.

    ಈ ಹುದ್ದೆಗಳಿಗೆ ಆಯ್ಕೆಯಾದವರಿಗೆ ವೇತನವನ್ನೂ ನಿಗದಿ ಮಾಡಲಾಗಿದೆ. ರೂ. 23,500ದಿಂದ ರೂ. 47,650ರವರೆಗೆ ಸಂಬಳ ನಿಗದಿಪಡಿಸಲಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಬ್ಬರಿಗೂ ಅವಕಾಶವಿದೆ. ಈ ಅಧಿಸೂಚನೆಯ ಕುರಿತು ಯಾರಿಗಾದರೂ ಆಕ್ಷೇಪಣೆಗಳು ಇದ್ದಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ, ವಿಧಾನಸೌಧ, ಬೆಂಗಳೂರು 560001 ಈ ವಿಳಾಸಕ್ಕೆ ಅಧಿಸೂಚನೆ ಪ್ರಕಟವಾದ ಹದಿನೈದು ದಿನಗಳಲ್ಲಿ ಸಲ್ಲಿಸಬಹುದು.

    ಚೀನಾ ಸಂಘರ್ಷದಲ್ಲಿ ಬಲಿಯಾದ ಯೋಧನ ಕುಟುಂಬಕ್ಕೆ ಐದು ಕೋಟಿ ರೂ., ಪತ್ನಿಗೆ ಸಹಾಯಕ ಆಯುಕ್ತೆ ಹುದ್ದೆ ನೀಡಿದ ತೆಲಂಗಾಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts