More

    ಕರ್ನಾಟಕ ವಿಶ್ವವಿದ್ಯಾಲಯದ ಘಟಿಕೋತ್ಸವ 30ಕ್ಕೆ

    ಧಾರವಾಡ: ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯದ 73ನೇ ಘಟಿಕೋತ್ಸವವನ್ನು ಅ. 30ರಂದು ಬೆಳಗ್ಗೆ 10.30ಕ್ಕೆ ಕವಿವಿ ಆವರಣದ ಗಾಂಽ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕುಲಪತಿ ಪ್ರೊ. ಕೆ.ಬಿ. ಗುಡಸಿ ಹೇಳಿದರು.
    ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸುವರು. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಗೌರವ ಉಪಸ್ಥಿತರಿರುವರು. ನವದೆಹಲಿಯ ಇಂಡೋ ಫ್ರೆಂಚ್ ಸೆಂಟರ್ ಫಾರ್ ಪ್ರಮೋಶನ್ ಆಫ್ ಅಡ್ವಾನ್ಸ್ ರಿಸರ್ಚ್ನ ನಿರ್ದೇಶಕ ಪ್ರೊ. ನಿತಿನ್ ಶೇಟ್ ಘಟಿಕೋತ್ಸವ ಭಾಷಣ ಮಾಡುವರು ಎಂದರು.
    ಘಟಿಕೋತ್ಸವದಲ್ಲಿ 3581 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆಯಲಿದ್ದಾರೆ. 22882 ವಿದ್ಯಾರ್ಥಿಗಳು ಸ್ನಾತಕ ಪದವಿ, 48 ಕಾನೂನು ಪದವಿ, 127 ಡಿಪ್ಲೋಮಾ ಪದವಿ, 199 ಸರ್ಟಿಫಿಕೇಟ್ ಕೋರ್ಸ್ ಪದವಿ ಪಡೆಯಲಿದ್ದಾರೆ. ವಿವಿಧ ಪದವಿಗಳಲ್ಲಿ ರ‍್ಯಾಂಕ್ ವಿಜೇತ 109 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, 49 ವಿದ್ಯಾರ್ಥಿಗಳಿಗೆ ನಗದು ಪಾರಿತೋಷಕ, ೬೪ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಪ್ರದಾನ ಮಾಡಲಾಗುವುದು ಎಂದರು.
    ಕುಲಸಚಿವರಾದ ಡಾ. ಚಂದ್ರಮ್ಮ ಎಂ. ಹಾಗೂ ಡಾ. ಸಿ. ಕೃಷ್ಣಮೂರ್ತಿ ಸುದ್ದಿಗೋಷ್ಠಿಯಲ್ಲಿದ್ದರು.

    ಮೂವರಿಗೆ ಗೌರವ ಡಾಕ್ಟರೇಟ್
    ಬಸವಣ್ಣನವರ ತತ್ವಗಳ ಪ್ರಚಾರ, ವಚನ ಸಾಹಿತ್ಯದಲ್ಲಿ ಅನುವಾದ ಸೇರಿ ಶರಣ ತತ್ವ ಪ್ರಚಾರಕ್ಕಾಗಿ ಕೊಡುಗೆ ನೀಡುತ್ತಿರುವ ಬಸವ ಸಮಿತಿಯ ರಾಜ್ಯ ಅಧ್ಯಕ್ಷ ಅರವಿಂದ ಜತ್ತಿ, ವಿದೇಶದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಿ ವಿಶೇಷವಾಗಿ ಆರೋಗ್ಯ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ನೀಡಿತ್ತಿರುವ ಧಾರವಾಡ ಮೂಲದ ಅಮೆರಿಕದಲ್ಲಿ ನೆಲೆಸಿರುವ ಶಿಕ್ಷಣ ಶಿಕ್ಷಣಪ್ರೇಮಿ ರವಿಶಂಕರ ಭೂಪಳಾಪೂರ ಹಾಗೂ ಗ್ರಾಮಗಳ ದತ್ತು ಸ್ವೀಕರಿಸಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ಉದ್ಯಮಿ, ಶಿಕ್ಷಣಪ್ರೇಮಿ ಅರ್ಚನಾ ಸುರಾಣಾ ಅವರಿಗೆ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವದು ಎಂದು ಪ್ರೊ. ಗುಡಸಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts